ಮೈಸೂರು/ಚಾಮರಾಜನಗರ: ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮರು ಆರಂಭಕ್ಕೆ ಸರ್ಕಾರ ನಿರ್ದೇಶನ ನೀಡಿರುವ ಬೆನ್ನಲ್ಲೇ ಶನಿವಾರ ಅರಣ್ಯ ಇಲಾಖೆ ಅಧಿಕಾರಿಗಳು ಸಿದ್ಧತೆ ಆರಂಭಿಸಿದರು.

ರೈತರ ತೀವ್ರ ವಿರೋಧದ ನಡುವೆಯೇ, ಬಂಡೀಪುರ ಹುಲಿ ಯೋಜನೆ ಕ್ಷೇತ್ರ ನಿರ್ದೇಶಕ ಎಸ್.ಪ್ರಭಾಕರನ್ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸಫಾರಿ ಮೇಲೆ ಅವಲಂಬಿತರಾಗಿರುವ ಹೋಟೆಲ್, ರೆಸಾರ್ಟ್, ಹೋಂಸ್ಟೇ ಮಾಲೀಕರು, ಹಾಗೂ ವ್ಯಾಪಾರಿಗಳು ಸಂತಸಗೊಂಡಿದ್ದು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

ರೈತರಿಂದ ವಿರೋಧ: ಸಫಾರಿಯನ್ನು ಮರು ಆರಂಭಿಸದಂತೆ ಸರ್ಕಾರವನ್ನು ಒತ್ತಾಯಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಾಲ್ಲೂಕಿನ 25ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ಮನವಿ ಸಲ್ಲಿಸಿದ್ದಾರೆ. ‘ಸಫಾರಿಯಿಂದ ರೈತರಿಗೆ ಅನಕೂಲವಿಲ್ಲ, ಬದಲಾಗಿ ಜನ ಜಾನುವಾರುಗೆ ತೊಂದರೆಯಾಗಲಿದೆ, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತದೆ’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.