ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ವಿದ್ಯುತ್‌ ಆಘಾತದಿಂದ ಹೆಣ್ಣಾನೆ ಸಾವು

Last Updated 13 ಜನವರಿ 2023, 13:38 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೊಡ್ಡಬರಗಿ ಗ್ರಾಮದ ಕೃಷಿ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲಿ ಹೆಣ್ಣಾನೆಯೊಂದು ಶುಕ್ರವಾರ ಮೃತಪಟ್ಟಿದೆ.

ಗ್ರಾಮದ ಗೋಪಾಲ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆನೆ ಮೃತಪಟ್ಟಿದೆ. ಆನೆಗೆ 25ರಿಂದ 30 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಜಮೀನಿನ ಮಾಲೀಕನ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.

2018ರಲ್ಲಿಯೂ ಇವರ ಜಮೀನಿನಲ್ಲೇ ವಿದ್ಯುತ್‌ ತಂತಿ ಸ್ಪರ್ಶಿಸಿ ಹೆಣ್ಣಾನೆಯೊಂದು ಮೃತಪಟ್ಟಿತ್ತು. ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ.

ಸ್ಥಳಕ್ಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ರಮೇಶ್ ಕುಮಾರ್, ಎಸಿಎಫ್ ಕೆ.ಪರಮೇಶ್ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದರು. ಪಶು ವೈದ್ಯಾಧಿಕಾರಿ ವಾಸಿಂ ಮಿರ್ಜಾ ಅವರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಅಂಗಗಳ ಮಾದರಿಗಳನ್ನು ಮೈಸೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT