ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಡೀಪುರ: ಹುಲಿ ದಾಳಿಯಲ್ಲಿ ವ್ಯಕ್ತಿ ಸಾವು

Published 12 ಡಿಸೆಂಬರ್ 2023, 7:36 IST
Last Updated 12 ಡಿಸೆಂಬರ್ 2023, 7:36 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಂಡೀಪುರ ವಲಯದ ಆಡಿನ ಕಣಿವೆ ಕಾಲೋನಿಯಲ್ಲಿ ಹುಲಿ ದಾಳಿಗೆ‌ ಸಿಕ್ಕಿ ಗ್ರಾಮಸ್ಥರೊಬ್ಬರು ಮೃತಪಟ್ಟಿದ್ದಾರೆ.

ಮಂಗಳವಾರ ಬೆಳಿಗ್ಗೆ ಮೃತದೇಹ ಪತ್ತೆಯಾಗಿದ್ದು, ಅರ್ಧ ದೇಹವನ್ನು ಹುಲಿ ತಿಂದಿದೆ.

ಆಡಿನಕಣಿವೆಯ ಬಸವ(54) ಮೃತಪಟ್ಟ ವ್ಯಕ್ತಿ. ಬುಡಕಟ್ಟು ಸಮುದಾಯಕ್ಕೆ ಸೇರಿದ ಬಸವ ಅವರು ಸೋಮವಾರ ಕುರಿಗಳನ್ನು ಮೇಯಿಸಲು ಕಾಲೊನಿಯ ಕೂಗಳತೆ ದೂರದಲ್ಲಿರುವ ಕಾಡಿಗೆ ತೆರಳಿದ್ದರು. ಆದರೆ ಮನೆಗೆ ವಾಪಸ್ ಆಗಿರಲಿಲ್ಲ.

ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾಗ ಮಂಗಳವಾರ ಬೆಳಿಗ್ಗೆ ಅರಣ್ಯದ ಒಳಗೆ ಅರ್ಧ ದೇಹ ತಿಂದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕುಟುಂಬಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT