ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ಸಮೀಪ ಅಂದಾಜು ₹6.5 ಕೋಟಿ ವೆಚ್ಚದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಭೂಮಿಪೂಜೆ ನೆರವೇರಿಸಿದರು.

ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಓಂಕಾರ ವಲಯ ವ್ಯಾಪ್ತಿಯ ಮಂಚಹಳ್ಳಿ ಸುತ್ತಮುತ್ತಲು ಸುಮಾರು 9 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಮೊದಲ ಹಂತದಲ್ಲಿ 4.67 ಕಿ.ಮೀ ಬ್ಯಾರಿಕೇಡ್ ನಿರ್ಮಾಣಕ್ಕೆ ₹6.5 ಕೋಟಿ ವೆಚ್ಚದಲ್ಲಿ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ವಿಶೇಷ ಕಾಳಜಿ ವಹಿಸಿ ಅನುದಾನ ಕೊಟ್ಟಿದ್ದಾರೆ. ಅಗತ್ಯವಿರುವೆಡೆ ಸಂಪೂರ್ಣವಾಗಿ ಬ್ಯಾರಿಕೇಡ್ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಅನುದಾನ ಮಂಜೂರು ಮಾಡುವುದಾಗಿಯೂ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಮಂಚಹಳ್ಳಿ ಭಾಗದ ರೈತರು ಮತ್ತು ಸ್ಥಳೀಯರು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡುವಂತೆ ಕಳೆದ ಮೂರು ವರ್ಷದಿಂದ ಒತ್ತಡ ಹಾಕುತ್ತಿದ್ದರು. ಆದರೆ ಅನುದಾನ ಬರುವುದು ವಿಳಂಭವಾಯಿತು. ಇದೀಗ 6.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಿದರೆ ಕಾಡು ಪ್ರಾಣಿಗಳ ಹಾವಳಿ ತಡೆಯಬಹುದು. ಮತ್ತು ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಕಾಡು ಪ್ರಾಣಿಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇದರ ಜೊತೆಗೆ ಸಮಸ್ಯೆ ಸಾಕಷ್ಟಿದೆ. ರೈತರು ಮತ್ತು ಜನರ ಒತ್ತಡವು ಇದೆ. ಬ್ಯಾರಿಕೇಡ್ ನಿರ್ಮಾಣ ಮಾಡುವುದರಿಂದ ರೈತರ ಹಿತ ಕಾಯುವ ಜೊತೆಗೆ ಜಮೀನಿನಲ್ಲಿ ಫಲಸುಗಳನ್ನು ಕಾಪಾಡುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಹುಲಿ ದಾಳಿ ಮತ್ತು ಕಾಡುಪ್ರಾಣಿಗಳ ಹಾವಳಿ ಹೆಚ್ಚಾದ ಹಿನ್ನೆಲೆ ಸಫಾರಿಯನ್ನು ಕೂಡ ನಿಲ್ಲಿಸಿ ಕಾಡು ಪ್ರಾಣಿಗಳನ್ನು ಹೇಗೆ ತಡೆಯಬಹುದು ಎಂದು ಚಿಂತಿಸಲಾಗಿತ್ತು. ಸಫಾರಿಯಿಂದ ಕಾಡುಪ್ರಾಣಿಗಳು ಹೊರ ಬರುವುದಿಲ್ಲ ಎಂದು ತಜ್ಞರ ಸಮಿತಿ ತಿಳಿಸಿದ ನಂತರ ಸರ್ಕಾರ ಸಫಾರಿ ಪುನರ್ ಆರಂಭದ ನಿರ್ಧಾರ ಕೈಗೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜಜೆಟ್ನಲ್ಲಿ ಅರಣ್ಯ ಇಲಾಖೆಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಅದನ್ನು ಬಳಕೆ ಮಾಡಿಕೊಂಡು ಗುಂಡ್ಲುಪೇಟೆ ವ್ಯಾಪ್ತಿಯ ಕಾಡು ಪ್ರದೇಶದಲ್ಲಿ ಆಗಬೇಕಾಗಿರುವ ರೈಲ್ವೆ ಬ್ಯಾರಿಕೇಡ್, ಟ್ರಂಚ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಗೆ ಹೆಚ್ಚು ಅನುದಾನ ಮೀಸಲಿಡಲು ಸರ್ಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್, ಎಪಿಎಫ್ ಸುರೇಶ್, ಆರ್ಎಫ್ಒ ಹನುಮಂತಪ್ಪ ಪಾಟೀಲ್, ಚಾಮುಲ್ ನಿರ್ದೇಶಕ ನಂಜುಂಡಪ್ರಸಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಮಂಚಹಳ್ಳಿ ಲೋಕೇಶ್, ರಾಜಶೇಖರ್, ಮಡಿವಾಳಪ್ಪ, ಉಮಾಪತಿ, ಎಪಿಎಂಸಿ ಮಾಜಿ ಅಧ್ಯಕ್ಷ ಶಿವನಾಗಪ್ಪ, ನಾಗರಾಜು, ಮಹದೇವಸ್ವಾಮಿ, ಮಂಚಹಳ್ಳಿ ಹರೀಶ್ ಸೇರಿದಂತೆ ಹಲವು ಮಂದಿ ಕಾಂಗ್ರೆಸ್ ಮುಖಂಡರು, ರೈತರು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-37-1194731076

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.