ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ: ಬುಧವಾರದಿಂದ ಬಂಡೀಪುರ ಸಫಾರಿ ಆರಂಭ

Last Updated 29 ಜೂನ್ 2021, 15:06 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಲಾಕ್‌ಡೌನ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಫಾರಿ ಬುಧವಾರದಿಂದ (ಜೂನ್‌ 30) ಆರಂಭವಾಗಲಿದೆ.

‘ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವುದರಿಂದ ಬಂಡೀಪುರ ಹುಲಿಯೋಜನೆ ವ್ಯಾಪ್ತಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಪುನರಾರಂಭ ಮಾಡಲಾಗುತ್ತಿದ್ದು, ಜೂನ್‌ 30ರಿಂದ ಸಫಾರಿ ಆರಂಭಿಸಲಾಗುತ್ತಿದೆ’ ಎಂದು ಹುಲಿಯೋಜನೆ ನಿರ್ದೇಶಕ ಎಸ್‌.ಆರ್‌.ನಟೇಶ್‌ ಅವರು ತಿಳಿಸಿದ್ದಾರೆ.

ಜುಲೈ 5 ರಿಂದ ಬಂಡೀಪುರ ವ್ಯಾಪ್ತಿಯಲ್ಲಿ ಎಲ್ಲ ಪ್ರವಾಸೋದ್ಯಮ ಚಟುವಟಿಕೆಗಳು ಆನ್‌ಲೈನ್‌ ಲಭ್ಯವಿರಲಿದೆ ಎಂದು ಅರಣ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೆ.ಗುಡಿ ಸಫಾರಿಯೂ ಆರಂಭ: ಚಾಮರಾಜನಗರ ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಕೆ.ಗುಡಿಯಲ್ಲೂ ಸಫಾರಿ ಆರಂಭವಾಗಲಿದೆ. ಶೇ 50ರಷ್ಟು ಪ್ರವಾಸಿಗರ ಮಿತಿಯಲ್ಲಿ ಸಫಾರಿ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT