ಗುಂಡ್ಲುಪೇಟೆ: ‘ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ಗುಂಡ್ಲುಪೇಟೆ ಠಾಣೆ ಇನ್ಸ್ಪೆಕ್ಟರ್ ಜಯಕುಮಾರ್ ಅವರು ಸಮವಸ್ತ್ರದಲ್ಲಿ ಕುಟುಂಬ ಸದಸ್ಯರ ಜೊತೆ ಖಾಸಗಿ ಜೀಪ್ನಲ್ಲಿ ಸುತ್ತಾಡಿದ್ದಾರೆ ಎನ್ನಲಾದ ವಿಡಿಯೋದಲ್ಲಿ ಕಂಡು ಬಂದ ಪ್ರದೇಶ ಅರಣ್ಯ ವ್ಯಾಪ್ತಿಯಲ್ಲಿಲ್ಲ’ ಎಂದು ಸಿಎಫ್ ಪ್ರಭಾಕರನ್ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೊ ಹಾಗೂ ಫೋಟೊಗಳು ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ‘ಅಧಿಕಾರಿಯು ಖಾಸಗಿ ಜೀಪ್ನಲ್ಲಿ ಹೋಗಿರುವ ರಸ್ತೆಯು ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿಲ್ಲ. ಖಾಸಗಿ ವ್ಯಕ್ತಿಯೊಬ್ಬರ ಜಾಗಕ್ಕೆ ಸೇರಿದೆ’ ಎಂದರು.

‘ಈ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಎಎಸ್ಪಿ ಶಶಿಧರ್ ಅವರಿಗೆ ಸೂಚಿಸಲಾಗಿದೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಎಸ್ಪಿ ಎಂ.ಮುತ್ತುರಾಜ್ ಪ್ರತಿಕ್ರಿಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-37-1730590083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.