ಭರಚುಕ್ಕಿ ವೀಕ್ಷಣೆ: ಸೋಮವಾರದಿಂದ ಪ್ರವಾಸಿಗರಿಗೆ ಅವಕಾಶ

ಕೊಳ್ಳೇಗಾಲ: ತಾಲ್ಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ವೀಕ್ಷಣೆಗೆ ಸೋಮವಾರದಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 9ರಿಂದ ಸಂಜೆ 5 ಗಂಟೆವರೆಗೆ ಸಮಯ ನಿಗದಿ ಪಡಿಸಲಾಗಿದೆ.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಲಾಕ್‌ಡೌನ್ ಜಾರಿಗೊಳಿಸಿದ ಕಾರಣಕ್ಕೆ ಪ್ರವಾಸಿ ತಾಣಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಮೂರನೇ ಹಂತದ ಅನ್‌ಲಾಕ್ ಸೋಮವಾರದಿಂದ ಜಾರಿಗೆ ಬರುತ್ತಿರುವುದರಿಂದ ಪ್ರವಾಸಿ ತಾಣಗಳನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ.
ನಿಯಮ ಪಾಲನೆ ಕಡ್ಡಾಯ: ‘ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಇದೆ. ನಗರದ ಮರಡಿಗುಡ್ಡದ ವೃಕ್ಷವನಕ್ಕೂ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವಾಸಿಗರು ಭೇಟಿ ನೀಡಬಹುದು. ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ವೈಯಕ್ತಿಕ ಅಂತರವನ್ನು ಕಾಪಾಡಿಕೊಳ್ಳಬೇಕು’ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಏಡುಕುಂಡಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.