ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹೆಜ್ಜೇನು ದಾಳಿ: ಜೆಎಸ್‌ಎಸ್‌ ಕಾಲೇಜು ಮಕ್ಕಳಿಗೆ ಗಾಯ

Published 28 ಫೆಬ್ರುವರಿ 2024, 16:49 IST
Last Updated 28 ಫೆಬ್ರುವರಿ 2024, 16:49 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬುಧವಾರ ಮಧ್ಯಾಹ್ನ ಹೆಜ್ಜೇನು ದಾಳಿಯಿಂದಾಗಿ ಕೆಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅವರನ್ನು ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದೆ. ‌

‘ಎಂಟು ವಿದ್ಯಾರ್ಥಿಗಳಿಗೆ ಒಂದೆರಡು ಜೇನುಗಳು ಕಡಿದಿವೆ. ಒಬ್ಬ ವಿದ್ಯಾರ್ಥಿಗೆ ಮಾತ್ರ ಸ್ವಲ್ಪ ಹೆಚ್ಚು ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ’ ಎಂದು ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್‌.ಎಂ.ಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು. 

ಮಧ್ಯಾಹ್ನ ಊಟದ ಬಿಡುವಿನ ವೇಳೆಯಲ್ಲಿ ಮೈದಾನದಲ್ಲಿದ್ದ ಮಕ್ಕಳಿಗೆ ಹೆಜ್ಜೇನು ಕಚ್ಚಿದೆ. ಶಾಲೆಯ ಕಟ್ಟಡದಲ್ಲಿ ಜೇನು ಗೂಡು ಇದ್ದರೂ, ಆ ಜೇನು ನೊಣಗಳು ಕಡಿದಿಲ್ಲ. ಹೊರಗಡೆಯಿಂದ ಬಂದಿದ್ದ ಜೇನುಗಳು ಕಡಿದಿವೆ ಎಂದು ಹೇಳಲಾಗುತ್ತಿದೆ. ‌ದಾಳಿ ಬಳಿಕ ಹೊಗೆ ಹಾಕಿ ಹೆಜ್ಜೇನುನೊಣಗಳನ್ನು ಓಡಿಸಲು ಕ್ರಮ ಕೈಗೊಳ್ಳಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT