ಚಾಮರಾಜನಗರ: ‘ಯಳಂದೂರು ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಕೆರೆಗಳನ್ನು ತುಂಬಿಸಿ ಅಲ್ಲಿಂದ ಬೆಂಗಳೂರು, ಗ್ರಾಮಾಂತರ, ತುಮಕೂರು ಹಾಗೂ ಸುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಅವೈಜ್ಞಾನಿಕ ಹಾಗೂ ಅಧಿಕ ವೆಚ್ಚದಾಯಕವಾಗಿದ್ದು, ಕೈಬಿಡಬೇಕು’ ಎಂದು ಕೆಐಎಡಿಬಿ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಸೂಚನೆ ನೀಡಿದರು.

ಬುಧವಾರ ಇಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಸಚಿವರು, ‘ಕೆರೆಗಳಿಂದ ನೀರೆತ್ತುವ ಯೋಜನೆಗೆ ಡಿಪಿಆರ್ ತಯಾರಿಸುವ ಮುನ್ನ ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ಅಭಿಪ್ರಾಯ ಪಡೆಯಬೇಕಿತ್ತು. ಯೋಜನೆಯ ಸಾಧಕ–ಬಾಧಕಗಳ ಕುರಿತು ಚರ್ಚೆ ಮಾಡದೆಯೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ನೀಡಿದವರು ಯಾರು ಎಂದು ಹರಿಹಾಯ್ದರು.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೆರೆಗಳಿಂದ ನೀರೆತ್ತುವ ಯೋಜನೆಗೆ ₹ 1,500 ಕೋಟಿ ಖರ್ಚು ಅಂದಾಜಿಸಲಾಗಿದ್ದು, ಇಷ್ಟು ಹಣದಲ್ಲಿ ಇಡೀ ಜಿಲ್ಲೆಗೆ ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸಬಹುದು. ರೈತರ ಹಾಗೂ ಜನರ ಹಿತದೃಷ್ಟಿಯಿಂದ ಯೋಜನೆ ಜಾರಿಗೆ ಅವಕಾಶ ನೀಡುವುದಿಲ್ಲ. ಯೋಜನೆ ಕೈಬಿಡುವಂತೆ ಹಿರಿಯ ಅಧಿಕಾರಿಗಳಿಗೆ ತಿಳಿಸಿ ಎಂದು ಕೆಐಎಡಿಬಿ ಸಹಾಯಕ ಕಾರ್ಯದರ್ಶಿ ಸಂಜೀವ್ ಉಪ್ಪಾರ್ಗೆ ಸೂಚನೆ ನೀಡಿದರು.

ಜಿಲ್ಲೆಯ 75 ಕೆರೆಗಳ ಪೈಕಿ 22 ಕೆರೆಗಳು ತುಂಬಿದ್ದು, 15 ಕೆರೆಗಳನ್ನು ತುಂಬಿಸುವ ಕಾರ್ಯ ಪ್ರಗತಿಯಲ್ಲಿದೆ. ಮೋಟಾರ್ ಪಂಪ್ಗಳು ದುರಸ್ತಿಯಲ್ಲಿದ್ದು ಶೀಘ್ರ ಎಲ್ಲ ಕೆರೆಗಳನ್ನು ತುಂಬಿಸಲಾಗುವುದು ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಈ ವೇಳೆ ಸಿಟ್ಟಿಗೆದ್ದ ಸಚಿವರು ಮೋಟಾರ್ ದುರಸ್ತಿಗೆ ಎರಡು ತಿಂಗಳು ಬೇಕೆ?, ಸಬೂಬು ಹೇಳದೆ ಮಹಾರಾಷ್ಟ್ರದ ಪುಣೆಗೆ ಮೋಟಾರ್ ಕೊಂಡೊಯ್ದು ದುರಸ್ತಿ ಮಾಡಿಸಿ ಕೆರೆಗಳಿಗೆ ನೀರು ತುಂಬಿಸಿ ಎಂದರು.

ತಾರತಮ್ಯ ಸಲ್ಲದು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಭೂಸ್ವಾಧೀನ ಸಂಬಂಧ ಬದನಗುಪ್ಪೆ ಗ್ರಾಮದಲ್ಲಿ ಒಂದು ಗುಂಟೆಗೆ ₹ 7 ಲಕ್ಷ ಭೂ ಪರಿಹಾರ ನಿಗದಿಪಡಿಸಿದರೆ, ಪಕ್ಕದಲ್ಲಿರುವ ಮುತ್ತಿಗೆ ಗ್ರಾಮದಲ್ಲಿ ಗುಂಟೆಗೆ ₹ 1 ಲಕ್ಷ ನಿಗದಿಪಡಿಸಿರುವುದು ಸರಿಯಲ್ಲ. ಮುತ್ತಿಗೆ ಗ್ರಾಮಸ್ಥರು ಪರಿಹಾರ ನಿಗದಿಗೆ ವಿರೋಧ ವ್ಯಕ್ತಪಡಿಸಿದ್ದು, ಭೂಸ್ವಾಧೀನಾಧಿಕಾರಿ ಮತ್ತೊಮ್ಮೆ ಸ್ಥಳಕ್ಕೆ ಭೇಟಿ ನೀಡಿ ಪರಿಷ್ಕೃತ ದರ ನಿಗದಿಪಡಿಸಬೇಕು ಎಂದು ಸಚಿವರು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಮಾತನಾಡಿ, ಬದನಗುಪ್ಪೆ ಹಾಗೂ ಮುತ್ತಿಗೆ ಗ್ರಾಮಗಳ ಒಟ್ಟಾರೆ ವಹಿವಾಟು ಆಧಾರದಲ್ಲಿ ಭೂಸ್ವಾಧೀನಾಧಿಕಾರಿ ದರ ನಿಗದಿಪಡಿಸಿದ್ದಾರೆ. ಪರಿಷ್ಕೃತ ದರ ನಿಗದಿಗೆ ಮತ್ತೊಮ್ಮೆ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಲು ಸೂಚನೆ ನೀಡಲಾಗುವುದು ಎಂದು ಸಮಜಾಯಿಷಿ ನೀಡಿದರು.

ನೀರು ಕೊಡಿ: ಮಳೆಗಾಲ ಮುಗಿಯುವ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಬೇಡಿಕೆ ಇರುವ ಗ್ರಾಮಗಳಿಗೆ ತುರ್ತು ನೀರು ಪೂರೈಕೆ ಮಾಡಬೇಕು ಎಂದು ಸಚಿವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ಮಾತನಾಡಿ ‘ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು, ಕೌದಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಟ್ಯಾಂಕರ್ಗಳ ಮೂಲಕ ಹಾಗೂ ಖಾಸಗಿ ಬೋರ್ವೆಲ್ಗಳಿಂದ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದರು.

ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂದ್ಯಾ ಮಾತನಾಡಿ, ಜಿಲ್ಲೆಯಲ್ಲಿ 20 ಆಶ್ರಮ ಶಾಲೆಗಳಿದ್ದು 1,796 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ಶೈಕ್ಷಣಿಕ ಸಾಲಿನಿಂದ 7ನೇ ತರಗತಿವರೆಗೆ ಕಲಿಕೆಗೆ ಸರ್ಕಾರ ಅವಕಾಶ ನೀಡಿದೆ. ಆದರೆ, ಬೋಧನೆಗೆ 107 ಶಿಕ್ಷಕರ ಪೈಕಿ 20 ಕಾಯಂ ಶಿಕ್ಷಕರು ಇದ್ದು, ಉಳಿದವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕಾಡಂಚಿನ ಶಾಲೆಗಳಲ್ಲಿ ಅತಿಥಿ ಶಿಕ್ಷಕರು ಸಿಗುತ್ತಿಲ್ಲ. ಕೆಲಸ ತೊರೆಯುತ್ತಿದ್ದಾರೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿಕ್ರಿಯಿಸಿ ಶಿಕ್ಷಣ ಇಲಾಖೆ ಶಿಕ್ಷಕರನ್ನು ನಿಯೋಜಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿರುವ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ಪೂರೈಕೆ ಮಾಡಬೇಕು, ಕುಡಿಯುವ ನೀರು, ಮಲಗಲು ಕಾಟ್, ಹಾಸಿಗೆ, ಹೊದಿಕೆಗಳನ್ನು ಪೂರೈಸಬೇಕು ಎಂದು ಸಚಿವರು ಸೂಚಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು ಪ್ರತಿಕ್ರಿಯಿಸಿ ಹೆಚ್ಚುವರಿ ಕಾಟ್ಗಳನ್ನು ಪೂರೈಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ, ಫಲಿತಾಂಶ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಲಾ ಕೊಠಡಿ ದುರಸ್ತಿ: ಜಿಲ್ಲೆಯಲ್ಲಿ ಶಾಲಾ ಕಟ್ಟಡಗಳು ಸುಸ್ಥಿತಿಯಲ್ಲಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ದುರಸ್ತಿಯಾಗಬೇಕಿರುವ ಕಟ್ಟಡಗಳನ್ನು ಪಟ್ಟಿ ಮಾಡಿ ಸರ್ಕಾರಕ್ಕೆ ಸಲ್ಲಿಸಬೇಕು, ದುರಸ್ತಿ ಸಾಧ್ಯವಿಲ್ಲದಷ್ಟು ಶಿಥಿಲಾವಸ್ಥೆ ತಲುಪಿದ್ದರೆ ಹೊಸ ಶಾಲಾ ಕಟ್ಟಡಗಳಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸಲು ತೆರೆಯಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳ ಫಲಿತಾಂಶ ಉತ್ತಮವಾಗಿದ್ದು ಮತ್ತಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು. ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಸ್ಟೆಲ್ಗಳಲ್ಲಿ ದಿನನಿತ್ಯದ ಊಟದ ಮೆನು ಪ್ರದರ್ಶಿಸಬೇಕು. ಶನಿವಾರ, ಭಾನುವಾರ ವಿದ್ಯಾರ್ಥಿಗಳು ಹಾಸ್ಟೆಲ್ಗಳಲ್ಲಿಯೇ ಉಳಿಯುವಂತಾಗಬೇಕು ಎಂದರು.

ರೈತರು ನಿಯಮಬಾಹಿರವಾಗಿ ಕೊಳವೆಬಾವಿ ಕೊರೆಸಿಕೊಂಡು ವಿದ್ಯುತ್ ಸಂಪರ್ಕ ಪಡೆದಿದ್ದರೆ ರೈತರೊಂದಿಗೆ ಚರ್ಚಿಸಿ, ನಿಗದಿತ ದಂಡ ಕಟ್ಟಿಸಿಕೊಂಡು ಸಕ್ರಮ ಮಾಡಿಕೊಡಬೇಕು. ರಸಗೊಬ್ಬರಗಳ ಅತಿಯಾದ ಬಳಕೆಯದುಷ್ಪರಿಣಾಮಗಳ ಕುರಿತು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.

ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ, ಡಾ.ಡಿ.ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಅಧಿಕಾರೇತರ ಕೆ.ಡಿ.ಪಿ ಸದಸ್ಯರಾದ ಸೈಯದ್ ಮುಸಾಯೀಜ್, ಎಂ.ಶಂಕರಪ್ಪ, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿರ್ದೇಶಕ ಎಂ. ಮಹದೇವಣ್ಣ, ಎಸ್ಪಿ ಬಿ.ಟಿ. ಕವಿತಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು..

ಚಾಮರಾಜನಗರದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣಗೊಂಡು ಮೂರು ವರ್ಷಗಳು ಕಳೆದರೂ ಉದ್ಘಾಟನೆ ಭಾಗ್ಯ ಸಿಕ್ಕಿಲ್ಲ. ನ.20ರಂದು ಮುಖ್ಯಮಂತ್ರಿ ಜಿಲ್ಲೆಗೆ ಭೇಟಿ ನೀಡಿದಾಗ ಉದ್ಘಾಟಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಮಹಮ್ಮದ್ ಅಸ್ಗರ್ ಚುಡಾ ಅಧ್ಯಕ್ಷ

‘ಮರಿ ವೀರಪ್ಪನ್ – ಅನುಮಾನ’

‘ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷಪ್ರಾಷನದಿಂದ ಐದು ಹುಲಿಗಳು ಮೃತಪಟ್ಟ ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇಲೆ ಅಂದಿನ ಡಿಸಿಎಫ್ ಚಕ್ರಪಾಣಿ ಅವರನ್ನು ಅಮಾನತುಗೊಳಿಸಲಾಯಿತು. ಆದರೆ ಈಚೆಗೆ ಹುಲಿಯನ್ನು ಮೂರು ತುಂಡುಗಳಾಗಿ ಕತ್ತರಿಸಿ ಹಾಕಿದಾಗ ಯಾವ ಅಧಿಕಾರಿಯನ್ನೂ ಹೊಣೆಗಾರರಾಗಿ ಮಾಡಲಿಲ್ಲ. ಇದರ ಹಿಂದೆ ಎಎಫ್ಎಸ್ ಅಧಿಕಾರಿಗಳ ಲಾಬಿ ಕೆಲಸ ಮಾಡಿರುವಂತೆ ಕಾಣುತ್ತಿದೆ’ ಎಂದು ಗಂಭೀರ ಆರೋಪ ಮಾಡಿದ ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಎಂ.ಎಂ ಹಿಲ್ಸ್ ಅರಣ್ಯದಲ್ಲಿ ಸರಣಿ ಹುಲಿಗಳ ಸಾವಿನ ಪ್ರಕರಣ ನೋಡಿದರೆ ಮರಿ ವೀರಪ್ಪನ್ ಹುಟ್ಟಿಕೊಂಡಿರುವ ಸಂಶಯವಿದೆ’ ಎಂದರು.

- ‘ಪ್ರಜಾವಾಣಿ ವರದಿ ಉಲ್ಲೇಖ’

ಬುಡಕಟ್ಟು ಸಮುದಾಯಗಳಿಗೆ ಪೂರೈಕೆಯಾಗುತ್ತಿರುವ ಪೌಷ್ಟಿಕ ಆಹಾರ ಕಳಪೆಯಾಗಿರುವ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿದ್ದು ಅಧಿಕಾರಿಗಳು ಗುಣಮಟ್ಟದ ಆಹಾರ ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಪೌಷ್ಟಿಕ ಆಹಾರ ಪೂರೈಕೆಗೆ ಜಿಲ್ಲಾ ಮಟ್ಟದಲ್ಲಿ ಟೆಂಡರ್ ನಡೆಯುವಾಗ ಸಮಸ್ಯೆ ಗಂಭೀರವಾಗಿರಲಿಲ್ಲ ರಾಜ್ಯಮಟ್ಟದಲ್ಲಿ ಟೆಂಡರ್ ನೀಡಿದ ಮೇಲೆ ಕಳಪೆ ಆಹಾರ ಪೂರೈಕೆಯಾಗುತ್ತಿದೆ ಹಿಂದಿನಂತೆಯೇ ಟೆಂಡರ್ ನಡೆಯಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್.ಬಿಂಧ್ಯಾ ಫೆಬ್ರುವರಿ ಹಾಗೂ ಮಾರ್ಚ್ನಲ್ಲಿ ವಿತರಣೆಯಾಗಿದ್ದ ಅಡುಗೆ ಎಣ್ಣೆ ಕಡಲೆಬೀಜ ಹಾಗೂ ರಾಗಿ ಕಳಪೆ ಗುಣಮಟ್ಟದಿಂದ ಕೂಡಿತ್ತು. ಬದಲಿ ಆಹಾರ ಪೂರೈಕೆಗೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿತ್ತು. ಎರಡು ತಿಂಗಳಿನಿಂದ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.