ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ತಿಕ ಸೋಮವಾರ: ಶಿವನಿಗೆ ವೀಳ್ಯದೆಲೆ ಅಲಂಕಾರ

Published 12 ಡಿಸೆಂಬರ್ 2023, 5:38 IST
Last Updated 12 ಡಿಸೆಂಬರ್ 2023, 5:38 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಶ್ರೀರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಸೋಮವಾರದ ಪ್ರಯುಕ್ತ ಶಿವನ ಮೂರ್ತಿಗೆ ವೀಳ್ಯದೆಲೆ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು.

ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆಯೇ ದೇವರ ಮೂರ್ತಿಗೆ ಗಂಧ, ವಿಭೂತಿ, ಎಳನೀರು, ಮೊಸರು, ಹಾಲು, ತುಪ್ಪ ಸೇರಿದಂತೆ ವಿವಿಧ ಬಗೆಯ ಅಭಿಷೇಕಗಳನ್ನು ನೆರವೇರಿಸಿ, ವಿಶೇಷವಾಗಿ ವೀಳ್ಯದೆಲೆಯಲ್ಲಿ ಅಲಂಕಾರವನ್ನು ಅರ್ಚಕ ಶಂಕರ ನಾರಾಯಣ ಜೋಯಿಸಿ ಅವರು ಮಾಡಿದರು.

ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಮಹಿಳೆಯರು ಆಗಮಿಸಿ, ದೇವರಿಗೆ ಪೂಜೆ ಸಲ್ಲಿಸಿ, ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಕಾರ್ತಿಕ ಸೋಮವಾರದ ಪ್ರಯುಕ್ತ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಸಹ ಏರ್ಪಡಿಸಲಾಗಿತ್ತು.

‘ಕಾರ್ತಿಕ ಮಾಸದ ಪ್ರತಿ ಸೋಮವಾರ ಶಿವನ ಮೂರ್ತಿಗೆ ವಿವಿಧ ಬಗೆಯ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಗುವುದು’ ಎಂದು ಅರ್ಚಕ ಶಂಕರ ನಾರಾಯಣ ಜೋಯಿಸಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT