ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ವಿವಿಧೆಡೆ ಭಗೀರಥ ಜಯಂತಿ ಆಚರಣೆ

Published 15 ಮೇ 2024, 4:39 IST
Last Updated 15 ಮೇ 2024, 4:39 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ವಿವಿಧೆಡೆ ಮಂಗಳವಾರ ಭಗೀರಥ ಮಹರ್ಷಿ ಜಯಂತಿ ಸರಳವಾಗಿ ಆಚರಿಸಲಾಯಿತು. 

ಉಪ್ಪಾರ ಸಂಘಟನೆಗಳು, ನಗರಸಭೆ ಕಚೇರಿ, ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.   

ಕಾಂಗ್ರೆಸ್‌ ಕಚೇರಿ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ, ‘ಸೂರ್ಯವಂಶದ ರಾಜನಾದ ಭಗೀರಥ ಮಹಾರಾಜ ತನ್ನ ಜನರಿಗಾಗಿ ಶಿವನ ತಪಸ್ಸು ಮಾಡಿ ಗಂಗೆಯನ್ನು ಧರೆಗೆ ತಂದ ಮಹಾ ಪುರುಷ. ಅವರ ತತ್ವ ಸಿದ್ದಾಂತಗಳು ಇಂದಿಗೂ ಪ್ರಸ್ತುತ’ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ‘ಭಗೀರಥ ಮಹರ್ಷಿಗಳ ತಪೋ ಶಕ್ತಿಗೆ ಶಿವನೇ ಪ್ರತ್ಯಕ್ಷವಾಗಿ, ಧರೆಗೆ ಗಂಗೆಯನ್ನು ಇಳಿಸಿದರು ಎಂಬ ಸತ್ಯ ಘಟನೆಯನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ. ಗಂಗೆಯನ್ನು ಭೂಮಿಗೆ ತರಲು ಭಗೀರಥ ಮಹರ್ಷಿಗಳು ಪಟ್ಟ ಶ್ರಮವನ್ನು ಈಗ ‘ಭಗೀರಥ ಪ್ರಯತ್ನ ಮಾಡು’ ಎಂದು ನಾವೆಲ್ಲರೂ ಹೇಳುತ್ತಿದ್ದೇವೆ’ ಎಂದರು. 

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಅಧ್ಯಕ್ಷ ಮಹಮದ್ ಅಸ್ಗರ್, ಕಾರ್ಯದರ್ಶಿ ಕಾಗಲವಾಡಿ ಚಂದ್ರು, ಮುಖಂಡರಾದ ಶಿವಮೂರ್ತಿ, ಜಿಲ್ಲಾ ಪಂಚಾಯಿತಿ  ಮಾಜಿ ಸದಸ್ಯ ಸೋಮನಾಯಕ, ಮುಖಂಡರಾದ ಮಹದೇವಶೆಟ್ಟಿ, ಸೈಯದ್ ರಫಿ, ಎಪಿಎಂಸಿ ಅಧ್ಯಕ್ಷ ಸೋಮೇಶ್, ಮಾಜಿ ಅಧ್ಯಕ್ಷ ಡಿ. ನಾಗೇಂದ್ರ, ನಿರ್ದೇಶಕ ಆಲೂರು ಪ್ರದೀಪ್, ಉಮೇಶ್, ಅರುಣ್‌ ಕುಮಾರ್, ಗೌಡಹಳ್ಳಿ ರಾಜೇಶ್, ಪುಟ್ಟಸ್ವಾಮಿ, ಸ್ವಾಮಿ, ರವಿಗೌಡ, ಮೋಹನ್ ನಾಗು, ಅಕ್ಷಯ್, ನಗರಸಭಾ ಸದಸ್ಯೆ ಚಿನ್ನಮ್ಮ ಪಾಲ್ಗೊಂಡಿದ್ದರು.

ಬಿಜೆಪಿ ಕಚೇರಿ: ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖಂಡರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. 

ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ರಾಮಚಂದ್ರ, ಒಬಿಸಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ನೂರೊಂದು ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾದೇವಸ್ವಾಮಿ ಎಂ ಹೊನ್ನೂರು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಆರ್.ಸುಂದರ್‌, ಚೂಡ ಮಾಜಿ ಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ಜಿಲ್ಲಾ ಕಾರ್ಯದರ್ಶಿ ನಟರಾಜ್, ಮಂಡಲ ಅಧ್ಯಕ್ಷರಾದ ಶಿವರಾಜ್, ಮಹಿಳಾ ಮೋರ್ಚಾ ಅಧ್ಯಕ್ಷೆ ಕಮಲಮ್ಮ, ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ, ನಗರಸಭಾ ಸದಸ್ಯ ಮನೋಜ್ ಪಾಟೀಲ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಾಜು ನಾಗರಾಜು ಎಸ್‌.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಚಂದ್ರು ಪಾಲ್ಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT