ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರಚುಕ್ಕಿ ಜಲಪಾತ ಪ್ರವಾಸಿಗರಿಗೆ ಮುಕ್ತ

Last Updated 12 ಆಗಸ್ಟ್ 2020, 15:11 IST
ಅಕ್ಷರ ಗಾತ್ರ

ಚಾಮರಾಜನಗರ: ಕೊಳ್ಳೇಗಾಲ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಭರಚುಕ್ಕಿ ಜಲಪಾತ ಇರುವ ಪ್ರದೇಶಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕೊಟ್ಟು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ಕೋವಿಡ್‌–19 ಕಾರಣದಿಂದಾಗಿ ಈವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಜಲಪಾತ ಮೈದುಂಬಿ ಆಕರ್ಷಣೀಯವಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ್ದ ಜಿಲ್ಲಾಧಿಕಾರಿ ಅವರು, ಪ್ರವಾಸಿಗರಿಗೆ ಅಗತ್ಯವಾದ ಮೂಲಸೌಕರ್ಯ ಹಾಗೂ ಕೋವಿಡ್‌ ತಡೆಗೆ ನಿಯಮ ಪಾಲನೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು.

ಉಪವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ ಅವರು ನೀಡಿರುವ ವರದಿಯ ಆಧಾರದಲ್ಲಿ ಪ್ರವಾಸಿ ತಾಣವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ ಎಂದು ಡಾ.ಎಂ.ಆರ್.ರವಿ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಅಗತ್ಯ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ, ಕೋವಿಡ್‌ ತಡೆಗಾಗಿ ಪ್ರವಾಸಿಗರನ್ನು ಥರ್ಮಲ್‌ ಸ್ಕ್ರೀನಿಂಗ್‌ ಮಾಡಲು ಬೇಕಾದ ವ್ಯವಸ್ಥೆ ಮಾಡಬೇಕು ಎಂದು ಅವರು ಆದೇಶದಲ್ಲಿ ಹೇಳಿದ್ದಾರೆ.

ದರ್ಗಾ ಭೇಟಿಗೂ ಅವಕಾಶ: ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಹಜರತ್‌ ಮರ್ದಾನೆ–ಎ–ಫೇಖ್‌ ದ‌ರ್ಗಾಕ್ಕೆ ಭಕ್ತರ ಭೇಟಿ ಹಾಗೂ ಪ್ರಾರ್ಥನೆ ಮಾಡುವುದಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ತೆರೆವುಗೊಳಿಸಿ ಜಿಲ್ಲಾಧಿಕಾರಿ ಆದೇಶಹೊರಡಿಸಿದ್ದಾರೆ. ಕೋವಿಡ್‌ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುಂತೆಯೂ ಅವರು ಸೂಚಿಸಿದ್ದಾರೆ.

ನಾಲ್‌ರೋಡ್, ಅರ್ಧನಾರೀಪುರ ಚೆಕ್‌ಪೋಸ್ಟ್ ತೆರವು

ಹನೂರು ತಾಲ್ಲೂಕಿನ ನಾಲ್‌ರೋಡ್ ಮತ್ತು ಅರ್ಧನಾರಿಪುರದದಲ್ಲಿ ಸ್ಥಾಪಿಸಲಾಗಿದ್ದ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸಿ, ವಾಹನ ಮತ್ತು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದ ಕಾರಣಕ್ಕೆ ಈ ಎರಡು ಚೆಕ್‌ಪೋಸ್ಟ್‌ಗಳಲ್ಲಿ ವಾಹನ ಮತ್ತು ಸಾರ್ವಜನಿಕರ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

ಜಿಲ್ಲೆಯ ಆರ್ಥಿಕ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸುವುದರ ಬಗ್ಗೆ ಸಾರ್ವಜನಿಕರಿಂದ ಯಾವುದೇ ಆಕ್ಷೇಪಣೆ ಬಾರದಿರುವುದರಿಂದ ಹನೂರು ತಾಲ್ಲುಕು ತಹಶೀಲ್ದಾರ್ ಹಾಗೂ ಚೆಕ್‌ಪೋಸ್ಟ್ ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಚೆಕ್‌ಪೋಸ್ಟ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT