ಧರೆಗುರುಳಿದ ಮರ: ಪೊನ್ನಾಚಿ ರಸ್ತೆ ಸಂಪರ್ಕ ಕಡಿತ

ಹನೂರು (ಚಾಮರಾಜನಗರ): ತಾಲ್ಲೂಕಿನಾದ್ಯಂತ ಗುರುವಾರ ರಾತ್ರಿ ಸುರಿದ ಮಳೆಗೆ ತಾಳಬೆಟ್ಟದಿಂದ ಪೊನ್ನಾಚಿಗೆ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ, ಪೊನ್ನಾಚಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ರಾತ್ರಿಯಿಡಿ ಸಂಚಾರ ಸ್ಥಗಿತಗೊಂಡಿತ್ತು.
ಪೊನ್ನಾಚಿ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಅದೃಷ್ಟವಶಾತ್ ವಿದ್ಯುತ್ ಸ್ಥಗಿತಗೊಳಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.