ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡ್ಲುಪೇಟೆ | ಅಪಘಾತ: ಬೈಕ್ ಸವಾರ ಸಾವು

Published 12 ಮೇ 2024, 15:25 IST
Last Updated 12 ಮೇ 2024, 15:25 IST
ಅಕ್ಷರ ಗಾತ್ರ

ಗುಂಡ್ಲುಪೇಟೆ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಮಲ್ಲಯ್ಯನಪುರದ ಸಿದ್ದಪ್ಪಾಜಿ (21) ಯುವಕ ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಕೇರಳ ರಸ್ತೆಯ ಸಿದ್ದಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಸಿದ್ದಪ್ಪಾಜಿ ಗುಂಡ್ಲುಪೇಟೆ ಪಟ್ಟಣದಿಂದ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ತೆರಳುವ ವೇಳೆ ಮುಂಬದಿಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಓವರ್ ಟೇಕ್ ಮಾಡುವ ಬರದಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಗುದ್ದಿದ್ದಾನೆ ಎನ್ನಲಾಗುತ್ತಿದ್ದು, ಮುಖಕ್ಕೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ವಾಹನ ವಶಕ್ಕೆ ಪಡೆದಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT