ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಾಮರಾಜನಗರ: ಆಮಿಷಕ್ಕೆ ಬಲಿಯಾಗದಿರಿ, ತಪ್ಪದೆ ಮತದಾನ ಮಾಡಿ

ಮತದಾನ ಜಾಗೃತಿಗಾಗಿ ಬೃಹತ್ ಬೈಕ್ ರ‍್ಯಾಲಿ, ದ್ವಿಚಕ್ರವಾಹನ ಚಲಾಯಿಸಿ ಡಿಸಿ, ಎಸ್‌ಪಿ, ಸಿಇಒ
Published 6 ಏಪ್ರಿಲ್ 2024, 16:06 IST
Last Updated 6 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ಚಾಮರಾಜನಗರ: ಲೋಕಸಭಾ ಚುನಾವಣೆಯ ಅಂಗವಾಗಿ ಮತದಾನದ ಮಹತ್ವ ಕುರಿತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್‌ ಸಮಿತಿ ಸಹಯೋಗದಲ್ಲಿ ನಡೆದ ಬೃಹತ್ ಬೈಕ್ ರ‍್ಯಾಲಿ ಗಮನ ಸೆಳೆಯಿತು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮತದಾನದ ಪ್ರತಿಜ್ಞಾ ವಿಧಿ ಬೊಧಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಇತರೆ ಗಣ್ಯರು ಕೇಸರಿ, ಬಿಳಿ, ಹಸಿರು ಬಣ್ಣಗಳಿಂದ ಕೂಡಿದ ಮತದಾನ ಜಾಗೃತಿಯ ಬಲೂನುಗಳನ್ನು  ಹಾರಿ ಬಿಡುವ ಮೂಲಕ ರ‍್ಯಾಲಿ ಉದ್ಘಾಟಿಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಶಿಲ್ಪಾ ನಾಗ್ ಮಾತನಾಡಿ, ‘ಪ್ರತಿಯೊಬ್ಬರಲ್ಲೂ ಮತದಾನದ ಜಾಗೃತಿ ಮೂಡಿಸಲು ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಚುನಾವಣೆಯು ಐದು ವರ್ಷಕ್ಕೊಮ್ಮೆ ಬರುವ ಹಬ್ಬವಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವ ಎಲ್ಲ ಅರ್ಹ ಮತದಾರರು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತದಾನ ಮಾಡಬೇಕು’ ಎಂದರು.

‘ಮತದಾನವು ಇದೇ 26ರಂದು ನಡೆಯಲಿದ್ದು, ಈ ಬಾರಿ ಮೊದಲ ಸಲ ಮತದಾನ ಮಾಡುವ 18 ವರ್ಷ ತುಂಬಿದ ಯುವ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಮತದಾನದ ಪಾಮುಖ್ಯ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೇ ಮತದಾನ ಮಾಡುವಂತೆ ಇತರರಿಗೂ ತಿಳಿ ಹೇಳಬೇಕು’ ಎಂದು ತಿಳಿಸಿದರು.

ಜಿಲ್ಲಾ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಪಿ.ಲಕ್ಷ್ಮಿ ಅವರು ರ‍್ಯಾಲಿಗೆ ಹಸಿರು ನಿಶಾನೆ ತೋರಿದರು. 

ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಎಸ್‌ಪಿ ಪದ್ಮಿನಿ ಸಾಹು ಅವರು ದ್ವಿಚಕ್ರ ವಾಹನ ಚಲಾಯಿಸಿ ಗಮನಸೆಳೆದರು.  

ಜಿಲ್ಲಾ ಕ್ರೀಡಾಂಗಣದಿಂದ ಹೊರಟ ರ‍್ಯಾಲಿ ನಗರದ ಎಲ್.ಐ.ಸಿ ವೃತ್ತ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ, ರಾಮಸಮುದ್ರ ಮೂಲಕ ಸಾಗಿ ಬಳಿಕ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಗುಂಡ್ಲುಪೇಟೆ ವೃತ್ತ ಮಾರ್ಗವಾಗಿ ಸಾಗಿ ಅಂತಿಮವಾಗಿ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ತಲುಪಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT