ಬುಧವಾರ, ಏಪ್ರಿಲ್ 21, 2021
23 °C

ನಿಂತಿದ್ದ ಲಾರಿಗೆ ಬೈಕ್‌ ಡಿಕ್ಕಿ: ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದ ಸೋಮವಾರಪೇಟೆಯ ಬಳಿ ಮಂಗಳವಾರ ರಾತ್ರಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಬಸವಾಪುರ ಗ್ರಾಮದ ನಿವಾಸಿ, ಯುವ ಜನ ಮತ್ತು ಕ್ರೀಡಾ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್‌ ಆಪರೇಟರ್‌ ಆಗಿ ಕೆಲಸ ಮಾಡುತ್ತಿದ್ದ ಬಸವಣ್ಣ (45) ಮೃತಪಟ್ಟವರು.

ಬಸವಣ್ಣ ಅವರು ರಾತ್ರಿ ಸ್ವಗ್ರಾಮ ಬಸವಾಪುರಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ, ಸೋಮವಾರಪೇಟೆಯ ಬಳಿಯ ಪೆಟ್ರೋಲ್‌ ಬಂಕ್ ಎದುರು ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದರು. ತಲೆ ಹಾಗೂ ಮುಖಕ್ಕೆ ತೀವ್ರ ಗಾಯವಾಗಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ. ಸಂಚಾರ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು, ಲಾರಿಯನ್ನು ಜಪ್ತಿ ಮಾಡಿದ್ದಾರೆ.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು