ಮಂಗಳವಾರ, ಮಾರ್ಚ್ 21, 2023
30 °C

ಚಾಮರಾಜನಗರ: ಬಿಆರ್‌ಟಿ: ಪಕ್ಷಿ ಸಮೀಕ್ಷೆ ಚಾಲನೆ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗುರುವಾರ ಪಕ್ಷಿ ಸಮೀಕ್ಷೆಗೆ ಚಾಲನೆ ನೀಡಲಾಯಿತು. 

ಕೆ.ಗುಡಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಸಮೀಕ್ಷೆ ಮಾಡಲು ಹೆಸರು ನೋಂದಣಿ ಮಾಡಿಕೊಂಡಿರುವ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳಿಗೆ ಗಣತಿ ಕಾರ್ಯದ ಬಗ್ಗೆ ಬಿಆರ್‌ಟಿ ಡಿಸಿಎಫ್‌ ದೀಪ್‌ ಜೆ.ಕಾಂಟ್ರಾಕ್ಟರ್‌ ಹಾಗೂ ಇತರೆ ಅಧಿಕಾರಿಗಳು ವಿವರಣೆ ನೀಡಿದರು. 

50 ಮಂದಿ ಸ್ವಯಂ ಸೇವಕರು ಹಾಗೂ 17 ಮಂದಿ ವಿದ್ಯಾರ್ಥಿಗಳು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದು, 25 ತಂಡಗಳನ್ನು ಮಾಡಲಾಗಿದೆ. ಶುಕ್ರವಾರದಿಂದ ಭಾನುವಾರದವರೆಗೂ ಸಮೀಕ್ಷೆ ನಡೆಯಲಿದೆ. ಶುಕ್ರವಾರ ಬೆಳಿಗ್ಗೆ ಬೇಗ ನಿಗದಿತ ಮಾರ್ಗದಲ್ಲಿ ಸ್ವಯಂ ಸೇವಕರು ಗಣತಿ ಕಾರ್ಯ ಆರಂಭಿಸಲಿದ್ದಾರೆ ಎಂದು ದೀಪ್‌ ಕಾಂಟ್ರಾಕ್ಟರ್‌ ಮಾಹಿತಿ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು