ಚಾಮರಾಜನಗರ: ಕೇರಳದಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ಕಾರಣದಿಂದ ಜಿಲ್ಲೆಯಲ್ಲೂ ಪಶುಪಾಲನೆ ಹಾಗೂ ವೈದ್ಯಕೀಯ ಸೇವೆಗಳ ಇಲಾಖೆ ಕಟ್ಟೆಚ್ಚರ ಕೈಗೊಂಡಿದೆ.

ಗುಂಡ್ಲುಪೇಟೆ ತಾಲ್ಲೂಕು ಕೇರಳದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದು, ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಪಶುಪಾಲನೆ ಇಲಾಖೆಯ ಸಿಬ್ಬಂದಿಯನ್ನು ಮಂಗಳವಾರ ಬೆಳಿಗ್ಗೆಯಿಂದಲೇ ನಿಯೋಜಿಸಲಾಗಿದೆ.

ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಪಶುಪಾಲನೆ ಇಲಾಖೆ ಉಪನಿರ್ದೇಶಕ ಡಾ.ಸಿ.ವೀರಭದ್ರಯ್ಯ ಅವರು, ‘ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಿದ್ದೇವೆ. ಕೇರಳದಿಂದ ನಮ್ಮ ಜಿಲ್ಲೆಗೆ ಕೋಳಿಗಳನ್ನು ಸಾಗಣೆ ಮಾಡುವುದಿಲ್ಲ. ನಮ್ಮಲ್ಲಿಂದಲೇ ಅಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತದೆ. ಕೇರಳ ಸರ್ಕಾರ ಕೋಳಿ ಸಾಗಣೆಗೆ ನಿರ್ಬಂಧ ವಿಧಿಸಿರುವುದರಿಂದ ಎರಡು ದಿನಗಳಿಂದ ಕೋಳಿಗಳನ್ನು ಸಾಗಿಸುವ ವಾಹನ ಸಂಚರಿಸಿಲ್ಲ. ಅಲ್ಲಿಂದ ಬರುವ ವಾಹನಗಳನ್ನು ಸ್ಯಾನಿಟೈಸ್ ಮಾಡಲು ವ್ಯವಸ್ಥೆ ಮಾಡಲಾಗಿದೆ’ ಎಂದರು.

ಇದನ್ನೂ ಓದಿ:ಕೇರಳದಲ್ಲಿ ಹಕ್ಕಿಜ್ವರ: ಕೊಡಗು ಜಿಲ್ಲೆಯಲ್ಲಿಯೂ ಮುನ್ನೆಚ್ಚರಿಕೆಗೆ ಸೂಚನೆ

‘ಜಿಲ್ಲೆಯಲ್ಲಿ ಕೋಳಿ ಅಥವಾ ಇತರ ಹಕ್ಕಿಗಳು ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿಲ್ಲ. ಹಾಗಾಗಿ ಜನರು ಆತಂಕ ಪಡಬೇಕಾಗಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.