ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳು: ಬಿಜೆಪಿ

Published 29 ಮಾರ್ಚ್ 2024, 13:55 IST
Last Updated 29 ಮಾರ್ಚ್ 2024, 13:55 IST
ಅಕ್ಷರ ಗಾತ್ರ

ಚಾಮರಾಜನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ಜಿಲ್ಲಾ ಘಟಕ ಆರೋಪಿಸಿದೆ. 

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಬೇಂದ್ರಪ್ಪ ಅವರು, ‘ ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿ ದ್ದು, ಎನ್‌ಸಿಆರ್‌ಬಿ ವರದಿಯಂತೆ ರಾಜ್ಯದಲ್ಲಿ ಆರ್ಥಿಕ ಅಪರಾಧಗಳ ಸಂಖ್ಯೆ 1,80,742 ಕ್ಕೆ ಏರಿದೆ. ಮಕ್ಕಳು ಮತ್ತು ಹಿರಿಯ ನಾಗರಿಕರ ಮೇಲಿನ ಅಪರಾಧಗಳಲ್ಲಿ ಗಮನಾರ್ಹ ಏರಿಕೆಕಂಡು ಬಂದಿದ್ದು, ಹಿರಿಯ ನಾಗರಿಕರಿಗೆ ರಕ್ಷಣೆ ನೀಡಲು ಸರ್ಕಾರ ವಿಫಲವಾಗಿದೆ’ ಎಂದು ದೂರಿದರು. 

ಬೆಳಗಾವಿಯಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಸರ್ಕಾರ ಇನ್ನೂ ಕಾನೂನು ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ದೇಶದ್ರೋಹಿಗಳ ಪರ ನಿಂತಿದೆ. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಸಂದರ್ಭದಲ್ಲಿ ನಾಸೀರ್ ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರು. ಇಂತಹವರನ್ನು ಗಡಿಪಾರು ಮಾಡದೇ ರಕ್ಷಣೆ ಮಾಡಿದೆ’ ಎಂದು ಅವರು ಆರೋಪಿಸಿದರು. 

‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ಭಯೋತ್ಪಾದಕರ ಅಡಗುದಾಣವಾಗಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ದಾಳಿ ಪ್ರಕರಣ ಸಾಕ್ಷಿಯಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಿರುವ ಹಿಂದೂ ಕಾರ್ಯಕರ್ತರ ಮೇಲೆ ರೌಡಿಶೀಟರ್ ತೆರೆಯುತ್ತಿದೆ. ದೂರುಗಳನ್ನು ದಾಖಲಿಸಿ ಹೋರಾಟಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ದೇಶದ್ರೋಹಿಗಳಿಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಸಿದರು. 

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ನಾರಾಯಣಪ್ರಸಾದ್ ಮಾತನಾಡಿ, ‘ಕಾಂಗ್ರೆಸ್‌ನ ತುಷ್ಟೀಕರಣ ನೀತಿ ದೇಶದ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಕಾಂಗ್ರೆಸ್ ಸರ್ಕಾರದ ದೇಶದ್ರೋಹಿ ವಿಚಾರವನ್ನು ಜನರಿಗೆ ತಿಳಿಸುವ ಕೆಲಸವನ್ನು ಬಿಜೆಪಿ ಮಾಡಲಿದೆ’ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ವಕ್ತಾರ ಕಾಡಹಳ್ಳಿ ಕುಮಾರ್, ಮಾಧ್ಯಮ ಸಂಚಾಲಕ ವೀರೇಂದ್ರ, ಮಂಜುನಾಥ್ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT