ಸೋಮವಾರ, ಜನವರಿ 25, 2021
14 °C
ಕಾಂಗ್ರೆಸ್ ಜನಪ್ರತಿನಿಧಿಗಳ ಆಕ್ರೋಶ

ಗುಂಡ್ಲುಪೇಟೆ: ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಬ್ಯಾನರ್ ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಐದು ಕೆರೆಗಳಿಗೆ ನೀರು ತುಂಬಿಸುವ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ  ಚಿಹ್ನೆ ಇರುವ ಬ್ಯಾನರ್ ಹಾಕಿದ್ದಕ್ಕೆ ಕಾಂಗ್ರೆಸ್ ಜನಪ್ರತಿನಿಧಿಗಳು ವೇದಿಕೆಗೆ ಹೋಗಲು ನಿರಾಕರಿಸಿ ಆಕ್ರೋಶ ವ್ಯಕ್ತಪಡಿಸಿದರು.

ರಾಘವಾಪುರ ಕೆರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಘಟನೆ ನಡೆಯಿತು.

ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಅಶ್ವಿನಿ ವಿಶ್ವನಾಥ್, ಉಪಾಧ್ಯಕ್ಷೆ ಶಶಿಕಲಾ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಧುಶಂಕರ್, ಉಪಾಧ್ಯಕ್ಷೆ ಸುಮಿತ್ರಾ ಮಹೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಕಾರ್ಯಕ್ರಮದಿಂದ ಹೊರ ನಡೆಯುವುದಾಗಿ  ತಿಳಿಸಿದಾಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಹಾಗೂ ಶಾಸಕ ಸಿ.ಎಸ್.ನಿರಂಜನ ಕುಮಾರ್ ಎದುರಲ್ಲೆ ಬ್ಯಾನರ್ ತೆಗೆಯಲಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಧುಂಕರ್ ಮಾತನಾಡಿ, ‘ಸರ್ಕಾರಿ ಕಾರ್ಯಕ್ರಮಕ್ಕೆ ಬಿಜೆಪಿ ಚಿಹ್ನೆ ಇರುವ ಬ್ಯಾನರ್ ಹಾಕಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.