ಭಾನುವಾರ, ಜುಲೈ 25, 2021
25 °C
ರಾಜ್ಯಸಭೆ ಚುನಾವಣೆ

ಸಾಮಾಜಿಕ ನ್ಯಾಯದ ಬಗ್ಗೆ ಪಕ್ಷದ ಬದ್ಧತೆಯ ದ್ಯೋತಕ: ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: 'ರಾಜ್ಯಸಭೆಗೆ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿರುವ ಸಂಪ್ರದಾಯ, ಮುಂದೆ ವಿಧಾನ ಪರಿಷತ್ ಗೆ ಆಯ್ಕೆ ವಿಚಾರದಲ್ಲೂ ಮುಂದುವರೆಯಬಹುದು' ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

ತಳಮಟ್ಟದ ಕ್ಷೌರಿಕ ಸಮುದಾಯದ ಸಾಮಾನ್ಯ ವ್ಯಕ್ತಿಗೆ ರಾಜ್ಯಸಭೆಗೆ ಅವಕಾಶ ಮಾಡಿಕೊಟ್ಟಿರುವುದು ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿ ಹೊಂದಿರುವ ಬದ್ಧತೆಯ ದ್ಯೋತಕ ಎಂದು ಬಣ್ಣಿಸಿದ ಕಾರಜೋಳ, ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿ ಹಾಗೂ ಪ್ರಮುಖರ ಅಭಿಪ್ರಾಯವನ್ನು ಗಣನೆಗೆ ತೆಗೆದುಕೊಂಡೇ ಹೈಕಮಾಂಡ್ ಮುಂದುವರೆದಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ರಾಜ್ಯಸಭೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದ ಕಾರಜೋಳ, ನೀವಿಲ್ಲಿ (ಮಾಧ್ಯಮದವರು) ಬಾಗಲಕೋಟೆಯಲ್ಲಿ ಇರುತ್ತೀರಿ. ನಾನು ಸದಾ ಬಿಎಸ್‌ವೈ ಪಕ್ಕದಲ್ಲಿಯೇ ಇರುತ್ತೇನೆ. ಅವರಿಗೆ ಬೇಸರವೂ ಇಲ್ಲ. ಅತೃಪ್ತಿಯೂ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು