ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಂದಕವಾಡಿ: ಬಿಜೆಪಿ, ಕಾಂಗ್ರೆಸ್‌ ಮತಯಾಚನೆ

ಮೋದಿ ಮತ್ತೆ ಪ್ರಧಾನಿಯಾಗಲು ನನ್ನನ್ನು ಬೆಂಬಲಿಸಿ: ಬಾಲರಾಜು
Published 14 ಏಪ್ರಿಲ್ 2024, 4:47 IST
Last Updated 14 ಏಪ್ರಿಲ್ 2024, 4:47 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶನಿವಾರ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು, ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಅವರು ಸ್ಥಳೀಯ ನಾಯಕರೊಂದಿಗೆ ಮತಯಾಚನೆ ಮಾಡಿದರು. 

ತಾಲ್ಲೂಕಿನ ಮಾದಾಪುರ, ಅಲೂರು, ಚಂದಕವಾಡಿ ಹಾಗೂ ಹರದಹಳ್ಳಿ ಶಕ್ತಿ ಕೇಂದ್ರಗಳಲ್ಲಿ ನಡೆದ ಬಿಜೆಪಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಎಸ್.ಬಾಲರಾಜು ‘ನರೇಂದ್ರ ಮೋದಿ ನಾಯಕತ್ವದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಅವರನ್ನು ಪ್ರಧಾನಿ ಮಾಡಲು ಕ್ಷೇತ್ರದ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕು. ನಿಮ್ಮೆಲ್ಲರ ಪ್ರತಿನಿಧಿಯಾಗಿ ದೆಹಲಿಗೆ ಹೋಗಲು ನನಗೊಂದು ಅವಕಾಶ ಮಾಡಿಕೊಡಬೇಕಕು’ ಎಂದು ಮನವಿ ಮಾಡಿದರು. 

‘ಕಳೆದ ಚುನಾವಣೆಯಲ್ಲಿ ಮಹದೇವಪ್ಪ ಅವರಿಗೆ ಅವಕಾಶ ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದಾರೆ. ಮತ್ತೊಮ್ಮೆ ಅವರ ಕುಟುಂಬದವರಿಗೆ ಮತ ಹಾಕುವುದು ಯಾವ ನ್ಯಾಯ? ಅಪ್ಪ ಸಚಿವರಾಗಿ ಸಾಕಷ್ಟು ಸಂಪಾದನೆ ಮಾಡಿದ್ದಾರೆ. ಇನ್ನು ಮಗನಿಗೂ ಅಧಿಕಾರ ಬೇಕು ಎನ್ನುತ್ತಿದ್ದಾರೆ. ಇವೆಲ್ಲವನ್ನು ಪ್ರಬುದ್ದ ಮತದಾರರು ಅರ್ಥೈಯಿಸಿಕೊಂಡಿದ್ದು, ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ’ ಎಂದರು.

‘ಸಾಮಾನ್ಯ ಕಾರ್ಯಕರ್ತನಾಗಿ ನಿಮ್ಮ ಸೇವೆ ಮಾಡಲು ಸಿದ್ದನಿದ್ದೇನೆ. ಸದಾ ನಿಮ್ಮೊಂದಿಗೆ ಬೆರತು ಕ್ಷೇತ್ರದ ಅಭಿವೃದ್ದಿಗೆ ದುಡಿಯುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಕ್ರಮಗಳನ್ನು ಪ್ರತಿ ಹಳ್ಳಿ ಹಳ್ಳಿಗೂ ತಲುಪಿಸಲು ಈ ಬಾರಿ ಬಿಜೆಪಿಗೆ ಅವಕಾಶ ನೀಡಿ. ನನ್ನನ್ನು ಆಶೀರ್ವದಿಸಬೇಕು’ ಎಂದರು.

‘ನಮ್ಮೆಲ್ಲರ ನಾಯಕ, ಸಂಸದ ವಿ. ಶ್ರೀನಿವಾಸಪ್ರಸಾದ್ ಅವರು ಇನ್ನೂ ಒಂದೂವರೆ ತಿಂಗಳು ನಮ್ಮ ಪಕ್ಷದ ಸಂಸದರಾಗಿರುತ್ತಾರೆ. ಅವರ ಬೆಂಬಲ ಸದಾ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರಿಗಿದೆ. ಕಾಂಗ್ರೆಸ್‌ನವರು ಸೋಲಿನ ಹತಾಶೆಯಿಂದ ನಿವೃತ್ತಿ ಘೊಷಣೆ ಮಾಡಿರುವ ಶ್ರೀನಿವಾಸ ಪ್ರಸಾದ್ ಮನೆಗೆ ಹೋಗುತ್ತಿದ್ದಾರೆ. ಮಹದೇವಪ್ಪ ಅವರು ತನ್ನ ಮಗನನ್ನು ಗೆಲ್ಲಿಸಿಕೊಳ್ಳಲು ಹಿಂದೆ ಸಂಸದರಿಗೆ ನೀಡಿದ್ದ ಎಲ್ಲ ನೋವು, ತೊಂದರೆಗಳನ್ನು ಮರೆತು ಶ್ರೀನಿವಾಸಪ್ರಸಾದ್ ಮುಂದೆ ನಿಂತಿದ್ದಾರೆ. ಸಾಲದು ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆದುಕೊಂಡು ಹೋಗಿರುವುದು ದುರಂತ’ ಎಂದು ವ್ಯಂಗ್ಯವಾಡಿದರು. 

ಮುಖಂಡರಾದ ಎಂ. ರಾಮಚಂದ್ರ, ನಾಗಶ್ರೀ ಪ್ರತಾಪ್, ನಿಜಗುಣರಾಜು , ಎನ್‌ರಿಎಚ್ ಮಹದೇವಸ್ವಾಮಿ ಸೇರಿದಂತೆ ಅನೇಕ ಮುಖಂಡರು ಮಾತನಾರಿದರು. 

ಚಾಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು, ಸುಂದ್ರಪ್ಪ, ಕೋಡಿ ಮೋಳೆ ರಾಜಶೇಖರ್, ಚಂದಕವಾಡಿ ಶಕ್ತಿ ಕೇಂದ್ರ ಅಧ್ಯಕ್ಷ ಅಯ್ಯನಪುರ ವಿಜಯೇಂದ್ರ, ಆಲೂರು ಶಕ್ತಿ ಕೇಂದ್ರದ ಅಧ್ಯಕ್ಷ ಶಿವಾನಂದ, ಶಿವಾಂಲಕಾರಪ್ಪ, ಚಿನ್ನಮುತ್ತು, ದಡದಹಳ್ಳಿ ಗೋವಿಂದರಾಜು, ಅರಕಲವಾಡಿ ನಾಗೇಂದ್ರ, ಕಾಗಲವಾಡಿ ಮಹದೇವಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಸೂರ್ಯ ಬಾಲರಾಜು, ಉಪಾಧ್ಯಕ್ಷ ವಿರಾಟ್ ಶಿವು, ಆನಂದ ಭಗೀರಥ ಗ್ರಾಮಗಳ ಮುಖಂಡರು ಪಾಲ್ಗೊಂಡಿದ್ದರು. 

ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಅವರು ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿಯಲ್ಲಿ ಮತಯಾಚನೆ ಮಾಡಿದರು. ಶಾಸಕ ಪುಟ್ಟರಂಗಶೆಟ್ಟಿ ಮುಖಂಡರು ಪಾಲ್ಗೊಂಡಿದ್ದರು
ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಅವರು ಚಾಮರಾಜನಗರ ತಾಲ್ಲೂಕಿನ ಕಾಗಲವಾಡಿಯಲ್ಲಿ ಮತಯಾಚನೆ ಮಾಡಿದರು. ಶಾಸಕ ಪುಟ್ಟರಂಗಶೆಟ್ಟಿ ಮುಖಂಡರು ಪಾಲ್ಗೊಂಡಿದ್ದರು

ಜಿಲ್ಲೆಯಲ್ಲಿ ಪ್ರಚಾರ ಆರಂಭಿಸಿದ ಬೋಸ್‌ ನಾಮಪತ್ರ ಸಲ್ಲಿಸಿದ ಬಳಿಕ ಮೈಸೂರು ಗ್ರಾಮಾಂತರ ಜಿಲ್ಲೆಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌ ಅವರು ಶನಿವಾರ ಚಂದಕವಾಡಿ ಗ್ರಾಮದ ಲಕ್ಷ್ಮೀದೇವಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು.  ಚಂದಕವಾಡಿ ನಾಗವಳ್ಳಿ ಕಾಗಲವಾಡಿ ಆಲೂರು ದೊಡ್ಡರಾಯಪೇಟೆ ಮಾದಾಪುರ ಮಂಗಲ ಸೇರಿದಂತೆ ವಿವಿಧ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು. ‘16 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ. ದಿವಂಗತ ಧ್ರುವನಾರಾಯಣ ಅವರಂತೆ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಕೈಗೊಳ್ಳಲು ಕ್ಷೇತ್ರದ ಮತದಾರರು ಈ ಬಾರಿ ನನ್ನನ್ನು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ‘2013ರಿಂದ 2018ರವರಗೆ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಕಳೆದ ಬಾರಿ ಲೋಕಸಭೆಗೆ ಆಯ್ಕೆ ಮಾಡಿ ಕಳುಹಿಸಿದ ಹೆಚ್ಚಿನ ಬಿಜೆಪಿ ಸಂಸದರು ರಾಜ್ಯದ ಅಭಿವೃದ್ದಿಯ ಕುರಿತು ಮೋದಿಯ ಮುಂದೆ ಮಾತನಾಡಲಿಲ್ಲ. ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಕ್ಷೇತ್ರದ ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಚ್ಚಿನಮತಗಳಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು. ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣಮಾತನಾಡಿದರು.  ಮತಯಾಚನೆ ವೇಳೆ ಬೋಸ್‌ ಆಲೂರು ಗ್ರಾಮದಲ್ಲಿ ಮಾಜಿ ರಾಜ್ಯಪಾಲ ದಿ. ಬಿ.ರಾಚಯ್ಯ ಸಮಾಧಿಗೆ ಭೇಟಿ ನೀಡಿ  ನಮನಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಆರ್.ಬಾಲರಾಜು ಕೆ.ಪಿ.ಸದಾಶಿವಮೂರ್ತಿ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್ ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರದಾನ ಕಾರ್ಯದರ್ಶಿಗಳಾದ ಚಿಕ್ಕಮಹದೇವ ಆರ್ಮಹದೇವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ಅಸ್ಗರ್ ಎ.ಎಸ್.ಗುರುಸ್ವಾಮಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ನಲ್ಲೂರು ಸೋಮೇಶ್ವರ್ ಕಾರ್ಮಿಕರ ಕನಿಷ್ಠ ವೇತನ ಮಾಜಿ ಅಧ್ಯಕ್ಷ ಆರ್.ಉಮೇಶ್ ಇತರರು ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT