ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ: ಪುಟ್ಟರಂಗಶೆಟ್ಟಿ

ಬಂದಿಗೌಡನಹಳ್ಳಿ ಅನೇಕ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
Published 7 ಏಪ್ರಿಲ್ 2024, 16:32 IST
Last Updated 7 ಏಪ್ರಿಲ್ 2024, 16:32 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಬಂದಿಗೌಡನಹಳ್ಳಿ ಗ್ರಾಮದ ಅನೇಕ ಮುಖಂಡರು ಭಾನುವಾರ ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು.

ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಅವರು ಪಕ್ಷದ ಶಾಲು ಹಾಕಿ ಮುಖಂಡರನ್ನು ಬರಮಾಡಿಕೊಂಡರು. 

ಗ್ರಾಮದ ಮುಖಂಡರಾದ ಸೋಮಶೇಖರ್, ಎನ್.ಮಲ್ಲೇಶ್, ಮಂಜುನಾಥ್, ಮಹೇಶ್, ಆನಂದ, ಬಿ.ಎಂ.ಮಲ್ಲೇಶ್, ಸೇರಿದಂತೆ ಅನೇಕರು ಕಾಂಗ್ರೆಸ್‌ ಸೇರಿದರು. 

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ‘ಬಿಜೆಪಿ ಕೇವಲ ಧರ್ಮ, ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುವ ಮೂಲಕ ಗ್ರಾಮ ಹಾಗೂ ದೇಶದಲ್ಲಿ ಗೊಂದಲ ಉಂಟು ಮಾಡುತ್ತಿದೆ. ಆದರೆ, ಕಾಂಗ್ರೆಸ್ ತತ್ವ ಸಿದ್ಧಾಂತಗಳೊಂದಿಗೆ 75 ವರ್ಷಗಳಿಂದ ರಾಜಕಾರಣ ಮಾಡುತ್ತಿದೆ. ದೀನ ದಲಿತರು, ಬಡವರು ಹಾಗೂ ಎಲ್ಲ ವರ್ಗವರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿಕೊಡಲು ಹೋರಾಟ ಮಾಡಿದ ಪಕ್ಷವಾಗಿದೆ’ ಎಂದರು.

‘ನಿಮ್ಮ ಗ್ರಾಮದ ಸಮಸ್ಯೆಗಳಿದ್ದರೆ ನೇರವಾಗಿ ನನಗೆ ತಿಳಿಸಿ. ಇಲ್ಲವೇ ನಿಮ್ಮ ಗ್ರಾಮದ ಮುಖಂಡರಾದ ಬಿ.ಕೆ. ರವಿಕುಮಾರ್ ಅವರಿಗೆ ಹೇಳಿ. ಈಗಾಗಲೇ ಬಂದಿಗೌಡನಹಳ್ಳಿ ಗ್ರಾಮದಲ್ಲಿ ಹೆಚ್ಚಿನ ಅಭಿವೃದ್ದಿ ಕೆಲಸ ಮಾಡುತ್ತಿದ್ದೇವೆ. ಸಮುದಾಯ ಭವನ ನಿರ್ಮಾಣ, ರಸ್ತೆಗಳ ಅಭಿವೃದ್ದಿ, ಸೇತುವೆ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇವೆ. ತಾವೆಲ್ಲರೂ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಬೆಂಬಲವನ್ನು ನೀಡಿ, ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸಿಕೊಡಿ’ ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಮಾತನಾಡಿ, ‘ಕಾಂಗ್ರೆಸ್ ಸಮುದ್ರ ಇದ್ದಂತೆ, ಎಲ್ಲರಿಗೂ ಅವಕಾಶಗಳು ದೊರೆಯುತ್ತವೆ. ತಾಳ್ಮೆಯಿಂದ ಕಾಯಬೇಕು. ಕಾಂಗ್ರೆಸ್‌ದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷನಾಗಿ, ಎಪಿಎಂಸಿ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷನಾಗಿ ಅನೇಕ ಹುದ್ದೆಯಲ್ಲಿದ್ದು, ಪಕ್ಷದ ಸಂಘಟನೆಯ ಜೊತೆಗೆ ಶಾಸಕ ಸಿ.ಪುಟ್ಟರಂಗಶೆಟ್ಟರ ನೇತೃತ್ವದಲ್ಲಿ ಕ್ಷೇತ್ರದ ಅಭಿವೃದ್ದಿಗೆ ದುಡಿಯುತ್ತಿದ್ದೇವೆ. ಪಕ್ಷದ ಸೇರ್ಪಡೆಯಾಗಿರುವ ತಾವೆಲ್ಲರೂ ದುಡಿಯುವ ಮೂಲಕ ಇನ್ನು ಹೆಚ್ಚಿನ ರೀತಿಯಲ್ಲಿ ಬಿಸಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಕ್ಷವನ್ನು ಬಲಪಡಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿಲ್ಲಾ ಎಸ್‌ಸಿ ಬ್ಲಾಕ್ ಅಧ್ಯಕ್ಷ ಸೋಮಣ್ಣ, ಕಾರ್ಮಿಕ ವಿಭಾಗದ ಅಧ್ಯಕ್ಷ ಮಹೇಶ್, ಎಪಿಎಂಸಿ ನಿರ್ದೇಶಕ ಆಲೂರು ಪ್ರದೀಪ್, ಬಿಸಲವಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಭುಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಯ ನಾಗರಾಜು, ಮುಖಂಡ ಬಿಸಲವಾಡಿ ರವಿ, ಬಸವರಾಜು, ಪ್ರಭುಸ್ವಾಮಿ, ಲೋಕೇಶ್, ವೀರಣ್ಣ, ಪಿ.ಕುಮಾರ್, ಗಣೇಶ್, ಸ್ವಾಮಿ ಆರಾಧ್ಯ, ನಿಂಗರಾಜು, ರವಿಗೌಡ, ದೊಡ್ಡರಾಯಪೇಟೆ ಮೂರ್ತಿ, ಕೆಂಪರಾಜು, ಹೊಸಹಳ್ಳಿ ಮಧುಸೂಧನ್ ಮೊದಲಾದವರು ಇದ್ದರು.


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT