ಚಾಮರಾಜನಗರ: ಮುಂಬೈನ ದಾದರ್ನಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆಯ ಮೇಲೆ ದಾಳಿ ನಡೆದಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಎಸ್ಸಿ ಮೋರ್ಚಾದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ, ಪ್ರತಿಭಟನನಿರತರು ನಂತರ ಕೆಲ ಕಾಲ ಪುತ್ಥಳಿ ಕೆಳಗಡೆ ಕುಳಿತ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಎಸ್.ಸಿ.ಮೋರ್ಚಾದ ಅಧ್ಯಕ್ಷ ಕಿನಕಹಳ್ಳಿ ಬಿ.ರಾಚಯ್ಯ ಅವರು ಮಾತನಾಡಿ, ‘ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಮನೆ ಹಾಗೂ ಗ್ರಂಥಾಲಯದ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ದಾಳಿ ನಡೆದುವಾರ ಕಳೆದರೂ ದಾಳಿಕೋರರು ಇನ್ನೂ ಪತ್ತೆಯಾಗಿಲ್ಲ. ಮಹಾರಾಷ್ಟ್ರ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದಂತೆ ಕಾಣುತ್ತಿಲ್ಲ. ಹಾಗಾಗಿ, ರಾಷ್ಟ್ರಪತಿಗಳು ಹಾಗೂ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಮಹಾರಾಷ್ಟ್ರ ಸರ್ಕಾರವನ್ನು ವಜಾ ಮಾಡಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಪ್ರಧಾನ ಕಾರ್ಯದರ್ಶಿಗಳಾದ ಮಂಗಲ ಶಿವಕುಮಾರ್, ನಾಗಶ್ರೀ, ಎಸ್ಟಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜಯಸುಂದರ, ಒಬಿಸಿ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ನಟರಾಜೇಗೌಡ, ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಮೂಡ್ನಾಕೂಡು ಪ್ರಕಾಶ್, ನಲ್ಲೂರು ಶ್ರೀನಾಥ್, ಪಕ್ಷದ ನಗರ ಘಟಕದ ಅಧ್ಯಕ್ಷ ಪರಶಿವಯ್ಯ, ಪ್ರಧಾನ ಕಾರ್ಯದರ್ಶಿ ರಾಮಸಮುದ್ರ ಶಿವಣ್ಣ, ಮುಖಂಡ ಬಾಲಸುಬ್ರಹ್ಮಣ್ಯ, ತಾಲ್ಲೂಕು ಪಂಚಾಯಿತಿ ಸದಸ್ಯ ರೇವಣ್ಣ, ಅಗರರಾಜು, ಪುಟ್ಟಸುಬ್ಬಪ್ಪ, ಸಿದ್ದರಾಜು, ಗೋಪಿ, ಗಂಗವಾಡಿ ಸೋಮಣ್ಣ, ಮಂಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.