ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಯೋಜನೆಗಳಿಗೆ ಕಾಂಗ್ರೆಸ್‌ ತಡೆ: ರುದ್ರೇಶ್‌

Published 19 ಏಪ್ರಿಲ್ 2024, 7:19 IST
Last Updated 19 ಏಪ್ರಿಲ್ 2024, 7:19 IST
ಅಕ್ಷರ ಗಾತ್ರ

ಚಾಮರಾಜನಗರ: ಮೋದಿ ನೇತೃತ್ವದ ಕೇಂದ್ರ ಸರ್ಕಾರ 10 ವರ್ಷಗಳ ಅವಧಿಯಲ್ಲಿ ರೈತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎಂ.ರುದ್ರೇಶ್‌ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನರೇಂದ್ರಮೋದಿ ಅವರು ರೈತರಿಗೆ ಏನೂ ಮಾಡಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ, ರೈತರಿಗಾಗಿಜಾರಿಗೊಳಿಸಿದ ಯೋಜನೆಗಳನ್ನು ರಾಜ್ಯದ ಕಾಂಗ್ರೆಸ್‌ ಸರ್ಕಾರ ತಡೆ ಹಿಡಿದಿದೆ’ ಎಂದು ದೂರಿದರು.

‘ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ ₹6000 ನೀಡುತ್ತದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಇದಕ್ಕೆ ಹೆಚ್ಚುವರಿಯಾಗಿ ₹4000 ಸೇರಿಸಿದ್ದರು. ಒಟ್ಟು ₹10 ಸಾವಿರ ಸಿಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ₹4000 ರಾಜ್ಯದ ಪಾಲನ್ನು ನಿಲ್ಲಿಸಿದೆ. ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹಧನ ಕೂಡ ನಿಲ್ಲಿಸಲಾಗಿದೆ’ ಎಂದರು.

‘ರೈತರು ತಮ್ಮ ಜಮೀನುಗಳಲ್ಲಿ ವಿದ್ಯುತ್‌ ಪರಿವರ್ತಕ ಹಾಕಿಸಿಕೊಳ್ಳಲು ಈ ಹಿಂದೆ ₹25 ಸಾವಿರ ಕಟ್ಟಬೇಕಿತ್ತು. ಆದರೆ, ಈಗ ₹1.50 ಲಕ್ಷ ಕಟ್ಟಬೇಕಿದೆ. ಸರಿಯಾಗಿ ವಿದ್ಯುತ್‌ ಪೂರೈಕೆ ಸಮರ್ಪಕವಾಗಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ’ ಎಂದು ದೂರಿದರು.

‘ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಾರತ ಮುಸ್ಲಿಂ ರಾಷ್ಟ್ರವಾಗಲಿದೆ. ಹಿಂದೂಗಳ ರಕ್ಷಣೆಗೆ ಬಿಜೆಪಿ ಬೆಂಬಲಿಸಬೇಕು’ ಎಂದು ರುದ್ರೇಶ್‌ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮುಖಂಡರಾದ ಹನುಮಂತಶೆಟ್ಟಿ, ಬಸವಣ್ಣ, ಮಲ್ಲೇಶ್, ಕಾಡಹಳ್ಳಿ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT