ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ಅ.2ರವರೆಗೆ ವಿವಿಧ ಸಾಮಾಜಿಕ ಕಾರ್ಯಗಳು

ಮೋದಿ ಜನ್ಮದಿನ, ಪಂಡಿತ್‌ ದೀನ್‌ದಯಾಳ್ ಜಯಂತಿ, ಗಾಂಧಿ ಜಯಂತಿ ಪ್ರಯುಕ್ತ ಆಯೋಜನೆ
Last Updated 16 ಸೆಪ್ಟೆಂಬರ್ 2020, 11:53 IST
ಅಕ್ಷರ ಗಾತ್ರ

ಚಾಮರಾಜನಗರ:ಪ್ರಧಾನಿ ನರೇಂದ್ರ ಮೋದಿ ಅವರ 70ನೇ ಜನ್ಮದಿನ, ಪಂಡಿತ್‌ ದೀನ್ ದಯಾಳ್‌ ಉಪಾಧ್ಯಾಯ ಮತ್ತು ಗಾಂಧಿ ಜಯಂತಿ ಅಂಗವಾಗಿ ಪಕ್ಷವು ಸೆ.14ರಿಂದ ಅಕ್ಟೋಬರ್‌ 02ರವರೆಗೆ ‘ಸೇವಾ ಹೀ ಸಂಘಟನೆ’ ಎಂಬ ಪರಿಕಲ್ಪನೆಯಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಸುಂದರ್‌ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆಯ ಮೇರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಸಪ್ತಾಹ ಹಮ್ಮಿಕೊಳ್ಳಲಾಗಿದೆ. 14ರಿಂದಲೇ ಆರಂಭವಾಗಿದ್ದು, 20ರವರೆಗೆ ನಡೆಯಲಿದೆ’ ಎಂದು ಹೇಳಿದರು.

‘ಪ್ರತಿ ಮಂಡಲದಲ್ಲಿ 70 ಅಂಗವಿಕಲರಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು, 70 ಬಡ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕನ್ನಡಕಗಳ ವಿತರಣೆ, ಜಿಲ್ಲೆಯ 70 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಬಡ ಕಾಲೊನಿಗಳಲ್ಲಿ ಹಣ್ಣು ಹಂಪಲು ವಿತರಣೆ, ಕೋವಿಡ್‌ಗೆ ತುತ್ತಾಗಿರುವ 70 ಮಂದಿಗೆ ಪ್ಲಾಸ್ಮಾ ದಾನ ಮಾಡುವುದು, ಯುವ ಮೋರ್ಚಾ ವತಿಯಿಂದ ನಂದಿಭವನದಲ್ಲಿ ರಕ್ತದಾನ ಶಿಬಿರ ಆಯೋಜನೆ, ಪ್ರತಿ ಬೂತ್‌ನಲ್ಲಿ 70 ಗಿಡಗಳನ್ನು ನೆಡುವುದು, ಪರಿಸರ ಸಂರಕ್ಷಣೆಯ ಸಂಕಲ್ಪ. ಜಿಲ್ಲೆಯ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಅವರು ಹೇಳಿದರು.

‘ಸೆ.25ರಂದು ಪಂಡಿತ್‌ ದೀನದಯಾಳ್‌ ಉಪಾಧ್ಯಾಯರ ಜನ್ಮದಿನ ಅಂಗವಾಗಿ ಬೂತು ಮಟ್ಟದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎಲ್ಲ ಬೂತ್‌ಗಳಲ್ಲಿ ದೀನ ದಯಾಳ್‌ ಅವರ ಪ್ರತಿಮೆ/ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡಲಾಗುವುದು. ವೆಬಿನಾರ್‌ಗಳ ಮೂಲಕ ಪಕ್ಷದ ವಿಚಾರಧಾರೆ ಮತ್ತು ದೀನದಯಾಳ್‌‌ ಅವರ ಜೀವನ ಕುರಿತು ಉಪನ್ಯಾಸಗಳನ್ನೂ ಏರ್ಪಡಿಸಲಾಗುತ್ತದೆ’ ಎಂದು ಸುಂದರ್‌ ಮಾಹಿತಿ ನೀಡಿದರು.

ಗಾಂಧಿ ಜಯಂತಿಯ ಅಂಗವಾಗಿ ಸೆ.25ರಿಂದ ಅಕ್ಟೋಬರ್‌ 2ರವರೆಗೆ ಪ್ರಧಾನಿ ಅವರು ಘೋಷಿಸಿರುವ ‘ಆತ್ಮ ನಿರ್ಭರ ಭಾರತ’ ಸಂಕಲ್ಪವನ್ನು ವಿವಿಧ ಸಂವಾದ ಕಾರ್ಯಕ್ರಮಗಳ ಮೂಲಕ ಜನರಿಗೆ ತಲುಪಿಸುವ ಯೋಜನೆ ಮಾಡಲಾಗಿದೆ. ₹20 ಲಕ್ಷ ಕೋಟಿ ಆತ್ಮ ನಿರ್ಭರ ಪ್ಯಾಕೇಜ್‌ನ ವಿವಿಧ ಯೋಜನೆಗಳನ್ನು ಬೂತು ಮಟ್ಟದಲ್ಲಿ ಪ್ರಚಾರ ಮಾಡಲಾಗುವುದು, ವೆಬಿನಾರ್‌ಗಳ ಮೂಲಕ ವಿಷಯ ತಜ್ಞರಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.

ಬಿಜೆಪಿ ರಾಜ್ಯ ಘಟಕದ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಜಿ.ಎನ್‌.ನಂಜುಂಡಸ್ವಾಮಿ, ಎಸ್‌ಟಿ ಮೋರ್ಚಾ ಉಪಾಧ್ಯಕ್ಷ ಎಂ.ರಾಮಚಂದ್ರು, ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೃಷಬೇಂದ್ರಪ್ಪ, ಮುಖಂಡರಾದ ಉಡಿಗಾಲ ನಾರಾಯಣಸ್ವಾಮಿ, ಹನುಮಂತಶೆಟ್ಟಿ ಇದ್ದರು.

ಸ್ವಯಂಪ್ರೇರಿತ ರಕ್ತದಾನ ಶಿಬಿರಇಂದು

ಪ್ರಧಾನಿ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಯುವಮೋರ್ಚಾವು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಂದಿ ಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಂಡಿದೆ.

ಯುವ ಮೋರ್ಆ ಕಾರ್ಯಕರ್ತರು ಭಾಗವಹಿಸಲಿದ್ದು, ಸಾರ್ವಜನಿಕರು ಕೂಡ ರಕ್ತದಾನ ಮಾಡಬಹುದು ಎಂದು ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಬಿ.ಸೂರ್ಯಕುಮಾರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT