ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತ ಯುವಕ ನಂದೀಶ್ ಮನೆಗೆ ತೆರಳಿ ಬಿಜೆಪಿ ಉಪಾಧ್ಯಕ್ಷ ಮಹೇಶ್ ಸಾಂತ್ವನ

Published 11 ಜನವರಿ 2024, 16:48 IST
Last Updated 11 ಜನವರಿ 2024, 16:48 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಲಿಂಗಣಾಪುರ ಬಡಾವಣೆ ಮೃತ ಯುವಕ ನಂದೀಶ್ ಮನೆಗೆ ಗುರುವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಹಾಗೂ ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಅವರು, ‘ಸಾವಿನ ಮನೆಯಲ್ಲಿ ಯಾರೂ ರಾಜಕಾರಣ ಮಾಡಬಾರದು. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮೃತರ ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡಬೇಕು. ನಗರ ಪೊಲೀಸ್ ಠಾಣೆಯ ಪಿಎಸ್ಐ ಮಹೇಶ್ ಕುಮಾರ್ ಕರ್ತವ್ಯ ಲೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಉನ್ನತ ಮಟ್ಟದ ತನಿಖೆ ನಡೆಸಿ ನ್ಯಾಯ ದೊರಕಿಸಿ ಕೊಡುವುದಾಗಿ ಐಜಿಪಿ ಹೇಳಿದ್ದಾರೆ. ನಗರದ ಬಸ್ ನಿಲ್ದಾಣದಲ್ಲಿ ಬೀಟ್ ಪೊಲೀಸರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂಬ ಮಾಹಿತಿ ದೊರೆತಿದೆ. ಸಂಬಂಧಪಟ್ಟ ಸಚಿವರ ಜೊತೆ ಮಾತನಾಡಿ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದಾಗಿ ಹೇಳುತ್ತೇನೆ. ಜೊತೆಗೆ ಯಾರೇ ತಪ್ಪು ಮಾಡಿದರೂ ಸರಿ ಅವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ರಾಮಕೃಷ್ಣ, ಕವಿತಾ, ಚಿಂತು ಪರಮೇಶ್, ಮುಖಂಡರು ಜಗದೀಶ್ ಶಂಕನಪುರ, ಸತೀಶ್, ಪ್ರಭುಸ್ವಾಮಿ, ವಕೀಲ ರಾಜೇಂದ್ರ, ಅಗಸ್ಟಿನ್, ನಗರ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಸಿದ್ದಪ್ಪಾಜಿ, ಸೋಮಣ್ಣ ಉಪ್ಪಾರ್, ಜಿಲ್ಲಾ ವಕ್ತಾರ ಬಸವರಾಜಪ್ಪ, ಬೆಂಡರಹಳ್ಳಿ ಮಹೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT