ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಮೊಳಕೆ ಒಡೆಯಲು ಬಿಡುವುದಿಲ್ಲ

ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಂದಿ ಎಂ.ಆಂಜನಪ್ಪ ಹೇಳಿಕೆ
Last Updated 2 ನವೆಂಬರ್ 2019, 12:28 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋಮುವಾದಿ ಬಿಜೆಪಿ ಮೊಳಕೆ ಒಡೆಯಲು ಬಿಡುವುದಿಲ್ಲ’ ಎಂದು ಕಾಂಗ್ರೆಸ್‌ ಅಭ್ಯರ್ಥಿ ನಂದಿ ಎಂ.ಆಂಜನಪ್ಪ ಹೇಳಿದರು.

ನಗರದ ಚಾಮರಾಜಪೇಟೆಯಲ್ಲಿ ಶನಿವಾರ ನಡೆದ ವಿವಿಧ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಹಿಂದಿನಿಂದಲೂ ನೆಲೆಯೇ ಇಲ್ಲ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಪಕ್ಷವನ್ನು ಜನತೆ ಬೆಂಬಲಿಸುವುದಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 20 ಸಾವಿರ ಮತ ಪಡೆದಿಲ್ಲ’ ಎಂದು ತಿಳಿಸಿದರು.

‘ಕ್ಷೇತ್ರದಲ್ಲಿ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತ ವರ್ಗದ ಜನರು ಹೆಚ್ಚಾಗಿದ್ದಾರೆ. ಅವರೆಲ್ಲರೂ ಮೊದಲಿನಿಂದಲೂ ಕಾಂಗ್ರೆಸ್ ಪರವಾಗಿದ್ದಾರೆ. ಸಿದ್ದರಾಮಯ್ಯ ಅವರ ಐದು ವರ್ಷಗಳ ಆಡಳಿತಾವಧಿಯ ಕಾರ್ಯಕ್ರಮಗಳೇ ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿವೆ’ ಎಂದು ಅಭಿಪ್ರಾಯಪಟ್ಟರು.

ಮುಖಂಡರಾದ ತರಕಾರಿ ವೆಂಕಟೇಶ್, ಕೃಷ್ಣಪ್ಪ, ನಾರಾಯಣಸ್ವಾಮಿ, ವೆಂಕಟೇಶ್ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಮುಖಂಡರಾದ ಅರುಣ್, ವಿನಯ್ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT