ಗುರುವಾರ , ಡಿಸೆಂಬರ್ 3, 2020
23 °C

ಉಪಚುನಾವಣೆಯಲ್ಲಿ ಗೆಲುವು: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರಾಜರಾಜೇಶ್ವರಿ ನಗರ ಹಾಗೂ ಶಿರಾ ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಕ್ಕೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಎರಡೂ ಕ್ಷೇತ್ರಗಳ ಫಲಿತಾಂಶ ಹೊರ ಬೀಳುತ್ತಲೇ, ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೇರಿದ ಪಕ್ಷದ ಮುಖಂಡರು, ಕಾರ್ಯಕರ್ತರು ಅಲ್ಲಿಂದ ಮೆರವಣಿಗೆ ಹೊರಟು, ವೀರಭದ್ರಸ್ವಾಮಿ ದೇವಸ್ಥಾನ, ರಥ ಬೀದಿಯ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ ಹಾಗೂ ಬಿಜೆಪಿ ಪರ ಜೈಕಾರ ಕೂಗಿ ಸಂಭ್ರಮಿಸಿದರು.

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್ ಅವರು ಮಾತನಾಡಿ, ‘ಆರ್.ಆರ್.ನಗರದಲ್ಲಿ ಮುನಿರತ್ನ ಹಾಗೂ ಶಿರಾದಲ್ಲಿ ಡಾ. ರಾಜೇಶ್‌ಗೌಡ ಅವರು ಗೆಲುವು ಸಾಧಿಸಿರುವುದು ತುಂಬಾ ಸಂತಸವಾಗಿದೆ. ಉಪಚುನಾವಣೆಯಲ್ಲೂ ಅಲ್ಲಿನ ಮತದಾರರು ಬಿಜೆಪಿ ಬೆಂಬಲಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈ ಬಲಪಡಿಸಿದ್ದಾರೆ. ಜನರು ಬಿಜೆಪಿ ಪರವಾಗಿದ್ದೇವೆ ಎಂಬ ಸಂದೇಶ ರವಾನಿಸಿ ವಿರೋಧ ಪಕ್ಷಗಳಿಗೆ ತಕ್ಕಪಾಠ ಕಲಿಸಿದ್ದಾರೆ’ ಎಂದರು.

ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎಂ.ರಾಮಚಂದ್ರ, ನಗರಸಭಾ ಸದಸ್ಯರಾದ ಶಿವರಾಜ್, ಮನೋಜ್‌ಪಟೇಲ್, ನಗರ ಮಂಡಲ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್, ಶಿವಣ್ಣ, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಪ್ರಶಾಂತ್, ಪ್ರಧಾನ ಕಾರ್ಯದರ್ಶಿ ಅರಕಲವಾಡಿ ಮಹೇಶ್, ಮುಖಂಡರಾದ ನಿಜಗುಣರಾಜು, ಬಾಲಸುಬ್ರಹ್ಮಣ್ಯ, ಸಿ.ಎಸ್.ಮಹದೇವನಾಯಕ, ಸುರೇಶ್‌ನಾಯಕ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಪ್ರಧಾನ ಕಾರ್ಯದರ್ಶಿ ಶಮಿತ್‌ಕುಮಾರ್, ಯುವಮೋರ್ಚಾದ ರಾಜ್ಯ ಉಪಾಧ್ಯಕ್ಷ ಧೀರಾಜ್, ಆನಂದ್ ಭಗೀರಥ್, ಎಂ.ಎಸ್.ಫೃಥ್ವಿರಾಜ್, ಜಿಲ್ಲಾ ಮಾಧ್ಯಮ ಪ್ರಮುಖ್ ಮಂಜುನಾಥ್, ಸಹ ಮಾಧ್ಯಮ ಪ್ರಮುಖ್ ಚಂದ್ರಶೇಖರ್, ನಂದೀಶ್, ವೀರೇಂದ್ರ, ಕುಮಾರಸ್ವಾಮಿ ಇದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು