ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಮೋರ್ಚಾ ಸಮಾವೇಶ 24ಕ್ಕೆ

Last Updated 22 ಮಾರ್ಚ್ 2023, 6:26 IST
ಅಕ್ಷರ ಗಾತ್ರ

ಚಾಮರಾಜನಗರ: ಬಿಜೆಪಿ ಜಿಲ್ಲಾ ಯುವ ಮೋರ್ಚಾದಿಂದ ಇದೇ 24ರಂದು ಗುಂಡ್ಲುಪೇಟೆಯಲ್ಲಿ ಜಿಲ್ಲಾ ಮಟ್ಟದ ಯುವ ಮೋರ್ಚಾ ಸಮಾವೇಶ ನಡೆಯಲಿದೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಮೋರ್ಚಾದ ಜಿಲ್ಲಾ ಅಧ್ಯಕ್ಷ ಪ್ರಣಯ್‌ ‘ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಿದ್ಧಗೊಳಿ ಸುವ ನಿಟ್ಟಿನಲ್ಲಿ ವಿವಿಧ ಮೋರ್ಚಾಗಳ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ. ಸಮಾವೇಶ 24ರಂದು ಬೆಳಿಗ್ಗೆ 10.30ಕ್ಕೆ ಗುಂಡ್ಲುಪೇಟೆಯ ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯಲಿದೆ’ ಎಂದರು.

‘ಸಮಾವೇಶದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಸಂಸದ ವಿ.ಶ್ರೀನಿವಾಸ ಪ್ರಸಾದ್‌, ಶಾಸಕರಾದ ಎನ್‌.ಮಹೇಶ್‌, ಸಿ.ಎಸ್‌.ನಿರಂಜನಕುಮಾರ್‌, ಸುರಪುರ ಶಾಸಕ ರಾಜು ನರಸಿಂಹನಾಯಕ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣ ಪ್ರಸಾದ್‌ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ಸಮಾವೇಶಕ್ಕೂ ಮೊದಲು ಬೈಕ್‌ ರ‍್ಯಾಲಿ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ಬೇಗೂರಿನಿಂದ ಬೈಕ್‌ ರ‍್ಯಾಲಿ ಮೂಲಕ ವಿಜಯೇಂದ್ರ ಹಾಗೂ ಇತರೆ ಗಣ್ಯರನ್ನು ಗುಂಡ್ಲುಪೇಟೆಗೆ ಕರೆ ತರಲಾಗುವುದು. 800ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಸಮಾವೇಶವು ಐತಿಹಾಸಿಕ ಕಾರ್ಯಕ್ರಮವಾಗಲಿದ್ದು, 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಇದರಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರ್ಯ ಕುಮಾರ್, ನಗರ ಮಂಡಲದ ಅಧ್ಯಕ್ಷ ಆನಂದ ಭಗೀರಥ, ಗ್ರಾಮಾಂತರ ಮಂಡಲದ ಅಧ್ಯಕ್ಷ ಮಹದೇವಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT