ಚಾಮರಾಜನಗರ: ಸಮೀಪದ ಮರಿಯಾಲದ ಮುರುಘ ರಾಜೇಂದ್ರಸ್ವಾಮಿ ಮಠದ ಇಮ್ಮಡಿ ಮುರುಘ ರಾಜೇಂದ್ರಸ್ವಾಮೀಜಿಯವರ ಜನ್ಮದಿನದ ಅಂಗವಾಗಿ ಭಾನುವಾರ ವಿವಿಧ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆದವು.
ಬೆಳಿಗ್ಗೆ 6 ಗಂಟೆಗೆ ಮಠದ ಗುರುಪರಂಪರೆಯ ಗದ್ದುಗೆಗೆ ಪೂಜೆ ಸಲ್ಲಿಸಲಾಯಿತು.
ಜನ್ಮದಿನದ ಅಂಗವಾಗಿ ಮುರುಘರಾಜೇಂದ್ರಸ್ವಾಮಿ ವಿದ್ಯಾಸಂಸ್ಥೆ, ಬಸವರಾಜೇಂದ್ರ ಆಸ್ಪತ್ರೆ ಹಾಗೂ ಬಸವರಾಜೇಂದ್ರ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಇಮ್ಮಡಿ ಮುರುಘ ರಾಜೇಂದ್ರಸ್ವಾಮೀಜಿ ಮತ್ತು ಚಾಮರಾಜನಗರ ವಿರಕ್ತ ಮಠ ಚನ್ನಬಸವಸ್ವಾಮೀಜಿಯವರು ರಕ್ತದಾನ ಮಾಡುವುದರ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಜಿ.ಕುಮಾರಸ್ವಾಮೀಜಿ, ಬಸವರಾಜೇಂದ್ರ ಆಸ್ಪತ್ರೆಯ ಡಾ.ಬಸವ ರಾಜೇಂದ್ರ, ಡಾ. ಶ್ವೇತಾ ಶಶಿಧರ್, ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಮುರುಘರಾಜೇಂದ್ರಸ್ವಾಮಿ ವಿದಾಸಂಸ್ಥೆ ನೌಕರ ವರ್ಗದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.