ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಏಡ್ಸ್‌ ದಿನ; 25 ಮಂದಿಯಿಂದ ರಕ್ತದಾನ

Last Updated 1 ಡಿಸೆಂಬರ್ 2020, 13:02 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕಜಿಲ್ಲಾ ವೀರಶೈವ ಲಿಂಗಾಯತರ ನೌಕರರ ಕ್ಷೇಮಾಭಿವೃದ್ದಿ ಸಂಘ, ರೋಟರಿ ಸಿಲ್ಕ್‌ ಸಿಟಿ, ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ನಗರದಲ್ಲಿ ಮಂಗಳವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು.

ನಗರದ ಮಹಾಮನೆಯಲ್ಲಿ ನಡೆದ ಶಿಬಿರದಲ್ಲಿ 25 ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು, ‘ನಮಗೆ ಅರೋಗ್ಯ ಬಹಳ ಮುಖ್ಯ. ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ದೇಹವನ್ನು ದಂಡಿಸಿದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ.ಏಡ್ಸ್ ಮಾರಕ ಕಾಯಿಲೆ ಬಂದಂತಹ ಸಂದಿಗ್ಧ ಪರಿಸ್ಥಿತಿಯಲ್ಲೇ ನಾವು ಈಗ ಇದ್ದು, ಕೊರೊನಾ ವೈರಸ್‌ ಜೊತೆ ಹೋರಾಡಿ ಅದರಿಂದ ಪಾರಾಗುವ ಮಾರ್ಗಗಳನ್ನು ಹುಡುಕುತ್ತಿದ್ದೇವೆ’ ಎಂದರು.

‘ಸಾಂಕ್ರಾಮಿಕ ರೋಗಗಳು ಬರದಂತೆ ಇರಲು ಜಾಗೃತಿ ಅವಶ್ಯಕ. ಸಮಾಜದ ಸ್ವಾಸ್ಥ್ಯಕ್ಕಾಗಿ ನಮ್ಮ ಜೀವನ ಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು. ರಕ್ತದಾನ ಮಾಡುವಂತಹವರು ಅದನ್ನು ದಾನ ಎನ್ನದೆ ಕರ್ತವ್ಯ ಎಂದು ತಿಳಿದು ಕೊಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಕ್ಷಯರೋಗ ಮತ್ತು ಏಡ್ಸ್ ನಿಯಂತ್ರಣಾಧಿಕಾರಿ ಡಾ.ಮಹದೇವು ಅವರು ಮಾತನಾಡಿದರು.

ಜಿಲ್ಲಾ ವೀರಶೈವ ಲಿಂಗಾಯತರ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ರವಿ, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಎ.ಎಸ್.ಪ್ರದೀಪ್, ಕಾರ್ಯದರ್ಶಿ ಮುರುಗೇಂದ್ರಸ್ವಾಮಿ, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ದಿವ್ಯ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT