ಹನೂರು: ತಾಲ್ಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಳ್ಯದಬಯಲು ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಅದೇ ಊರಿನ ಮೀನಾಕ್ಷಿ (31) ಮತ್ತು ರವಿ (30) ಎಂಬುವವರ ಮೃತದೇಹಗಳು ಭಾನುವಾರ ಪತ್ತೆಯಾಗಿವೆ.

ಕೃಷಿ ಹೊಂಡದಲ್ಲಿ ಶವಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹನೂರು ಇನ್ಸ್ಪೆಕ್ಟರ್ ಆನಂದ್ ಮೂರ್ತಿ ನೇತೃತ್ವದ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿತು. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.