ಮಂಗಳವಾರ, ಸೆಪ್ಟೆಂಬರ್ 21, 2021
22 °C
ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕತರು

ಬೊಮ್ಮಾಯಿ ಸಿ.ಎಂ: ಬಿಜೆಪಿ ಸಂಭ್ರಮಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಬಸವರಾಜ ಬೊಮ್ಮಾಯಿ ರಾಜ್ಯದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ; ಜಿಲ್ಲಾ ಬಿಜೆಪಿ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. 

ಚಾಮರಾಜೇಶ್ವರ ಉದ್ಯಾನದಿಂದ ಭುವನೇಶ್ವರಿ ವೃತ್ತದವರೆಗೆ ಮೆರವಣಿಗೆಯಲ್ಲಿ ಬಂದ ಮುಖಂಡರು ಹಾಗೂ ಕಾರ್ಯಕರ್ತರು, ವೃತ್ತದಲ್ಲಿ ಸಂಭ್ರಮಾಚರಣೆ ನಡೆಸಿದರು. 

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಸುಂದರ್, ಉಪಾಧ್ಯಕ್ಷ ಪಿ.ವೃಷಬೇಂದ್ರಪ್ಪ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಶ್ರೀ, ಗ್ರಾಮಾಂತರ ಮಂಡಲದ ಅಧ್ಯಕ್ಷ ಬಸವಣ್ಣ, ಟೌನ್ ಅಧ್ಯಕ್ಷ ರಾಜು, ಪ್ರಧಾನ ಕಾರ್ಯದರ್ಶಿ ಶಿವುರಾಮಸಮುದ್ರ, ನಗರಸಭಾ ಸದಸ್ಯರಾದ ಶಿವರಾಜು, ಮಂಜುನಾಥ್, ಮನೋಜ್ ಪಟೇಲ್, ಮುಖಂಡರಾದ ಎಸ್.ಬಾಲಸುಬ್ರಹ್ಮಣ್ಯಂ, ನಟರಾಜು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೂರ್ಯಬಾಲರಾಜ್, ಕಾರ್ಯದರ್ಶಿ ಮರಿಯಾಲ ಮಹೇಶ್, ಹೊಸೂರು ರಾಜು, ಗ್ರಾಮ ಪಂಚಾಯಿತಿ ಸದಸ್ಯ ಉತ್ತವಳ್ಳಿ ಮಹೇಶ್‌, ಎಸ್.ನಂದೀಶ್ ವಿಶ್ವಕರ್ಮ, ರವಿಕುಮಾರ್, ಮಹೇಶ್, ಆರ್.ಪುಟ್ಟಮಲ್ಲಪ್ಪ, ಕೇಬಲ್ ರಂಗಸ್ವಾಮಿ, ಕೂಸಣ್ಣ ಮತ್ತಿತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು