ಶನಿವಾರ, 9 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

Published 25 ಸೆಪ್ಟೆಂಬರ್ 2023, 13:18 IST
Last Updated 25 ಸೆಪ್ಟೆಂಬರ್ 2023, 13:18 IST
ಅಕ್ಷರ ಗಾತ್ರ

ಕೊಳ್ಳೇಗಾಲ: ಇಲ್ಲಿನ ಕೊಂಗಳ ಕೆರೆಯಲ್ಲಿ ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ನಗರದ ಬಾಪು ನಗರದ ನಿವಾಸಿ ಮಹದೇವ ಎಂಬುವರ ಮಗ ನಿತೀನ್ (7) ಎಂಬಾತ ಮೃತಪಟ್ಟಿದ್ದಾನೆ.

ಬಡಾವಣೆಯ ಹಿಂಭಾಗದ ಕೆರೆಯಲ್ಲಿ ಬಾಲಕ ಆಟವಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾನೆ, ಇದನ್ನು ಕಂಡವರು ಆತನನ್ನು ನೀರಿನಿಂದ ಮೇಲೆತ್ತಿದ್ದಾರೆ. ನಂತರ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗ ಮಧ್ಯದಲ್ಲಿ ಕೊನೆ ಉಸಿರು ಎಳೆದಿದ್ದಾನೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT