ಮಂಗಳವಾರ, ಜನವರಿ 19, 2021
17 °C

ಮಹದೇಶ್ವರ ಬೆಟ್ಟ: ಸಹೋದರಿ, ಸಹೋದರರ ಸವಾಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಹದೇಶ್ವರ ಬೆಟ್ಟ: ಇಲ್ಲಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಕ್ಕ –ತಂಗಿಯರು, ಅಣ್ಣ– ತಮ್ಮಂದಿರು ಮುಖಾಮುಖಿಯಾಗಿ ಸ್ಪರ್ಧಿಸಿದ್ದು, ಚುನಾವಣಾ ಕಣ ರಂಗೇರಿದೆ.  

ಇಂಡಿಗನತ್ತ ಗ್ರಾಮದಲ್ಲಿ ರಾಜಮ್ಮ ಹಾಗೂ ಅವರ ಸಹೋದರಿಯಾದ ನಾಗರತ್ನ ನಾಮಪತ್ರ ಸಲ್ಲಿಸಿದ್ದಾರೆ. ರಾಜಮ್ಮ ಕಾಂಗ್ರೆಸ್‌ ಪರ ಒಲವು ಹೊಂದಿದ್ದರೆ, ನಾಗರತ್ನ ಬಿಜೆಪಿಯ ಪರವಾಗಿದ್ದಾರೆ. 

ಕೊಂಬುಡಿಕ್ಕಿ ಗ್ರಾಮದಲ್ಲಿ ಬೆಳ್ಳಿ ಹಾಗೂ ಅವರ ಸಹೋದರ ಶಿವಣ್ಣ ಅವರು ಸ್ಪರ್ಧಿಸಿದ್ದಾರೆ. ಬೆಳ್ಳಿ ಅವರು ಜೆಡಿಎಸ್‌ ಪರವಾಗಿದ್ದರೆ, ಶಿವಣ್ಣ ಅವರು ಕಾಂಗ್ರೆಸ್‌ ಜೊತೆಗೆ ಗುರುತಿಸಿಕೊಂಡಿದ್ದಾರೆ.

ಅಕ್ಕ ತಂಗಿಯರು ಹಾಗೂ ಅಣ್ಣ ತಮ್ಮಂದಿರ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟಿದ್ದು, ಯಾರು ಗೆಲ್ಲುತ್ತಾರೆ ಎಂಬ ಕುತೂಹಲ ಗ್ರಾಮಸ್ಥರಲ್ಲಿ ಮನೆ ಮಾಡಿದೆ. 

ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ 11 ಸದಸ್ಯ ಸ್ಥಾನಗಳಿದ್ದು 110 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ. ಈ ಪೈಕಿ ಎರಡು ಅರ್ಜಿಗಳು ತಿರಸ್ಕೃತಗೊಂಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು