ಗುಂಡ್ಲುಪೇಟೆ: ಯಡಿಯೂರಪ್ಪ ಅಭಿಮಾನಿ ಆತ್ಮಹತ್ಯೆ

ಗುಂಡ್ಲುಪೇಟೆ: ತಾಲ್ಲೂಕಿನ ಬೋಮ್ಮಲಾಪುರ ಗ್ರಾಮದ ಬಿಜೆಪಿ ಕಾರ್ಯಕರ್ತ, ಯಡಿಯೂರಪ್ಪ ಅವರ ಅಭಿಮಾನಿ ರವಿ ಎಂಬುವವರು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಡಿಯೂರಪ್ಪ ಅವರು ಸೋಮವಾರ ರಾಜಿನಾಮೆ ಸಲ್ಲಿಸಿದ ನಂತರ ರವಿ (35) ಅವರು ಬೇಸರದಲ್ಲಿದ್ದರು. ಇದೇ ಕಾರಣಕ್ಕೆ ಮನನೊಂದು ಸೋಮವಾರ ರಾತ್ರಿ ತಮ್ಮ ಹೋಟೆಲ್ ನಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾರಾಗಿದ್ದಾರೆ ಎನ್ನಲಾಗಿದೆ.
ಬೆಂಬಲಿಗನ ಆತ್ಮಹತ್ಯೆಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, 'ನನ್ನ ರಾಜೀನಾಮೆಯಿಂದ ಮನನೊಂದು ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ' ಎಂದು ಹೇಳಿದ್ದಾರೆ.
ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.(1/2)
— B.S. Yediyurappa (@BSYBJP) July 27, 2021
ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ. (2/2)
— B.S. Yediyurappa (@BSYBJP) July 27, 2021
ರವಿ ಅವರು ಬೊಮ್ಮಲಾಪುರದಲ್ಲಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಗೆ ತರಕಾರಿ ವ್ಯಾಪಾರವನ್ನೂ ಮಾಡುತ್ತಿದ್ದರು. ಸಾಲವನ್ನೂ ಮಾಡಿದ್ದರು. ಸಾಲದ ಹೊರೆಯೂ ಅವರನ್ನು ಬಾಧಿಸುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಠಾಣೆಯಲ್ಲಿ ಪ್ರಕರಣ ಇನ್ನೂ ದಾಖಲಾಗಿಲ್ಲ.
ಶಾಂತಿ ಸಂದೇಶ ವಿವಾದ: ವಾಜಪೇಯಿ, ಅಡ್ವಾಣಿ, ಮೋದಿ ದುರ್ಬಲರೇ? ಕಾಂಗ್ರೆಸ್ ಪ್ರಶ್ನೆ
ಆತ್ಮಹತ್ಯೆ ಮಾಡಿಕೊಂಡ ರವಿ ಅವರ ಸಾಂದರ್ಭಿಕ ಚಿತ್ರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.