ಬುಧವಾರ, ನವೆಂಬರ್ 20, 2019
22 °C

ಬಿಎಸ್‌ಪಿ: ಮೈಸೂರಿನಲ್ಲಿ ಸಭೆ

Published:
Updated:

ಚಾಮರಾಜನಗರ: ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಪಕ್ಷದ ರಾಜ್ಯ ಸಮಿತಿ, ವಲಯ, ವಿಭಾಗ, ಜಿಲ್ಲೆ ಮತ್ತು ತಾಲ್ಲೂಕು ಸಮಿತಿಗಳನ್ನು ವಿಸರ್ಜಿಸಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಎಂ.ಕೃಷ್ಣಮೂರ್ತಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 

ಮೈಸೂರು ವಲಯ, ವಿಭಾಗ, ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಗಳನ್ನು ಪುನರ್‌ರಚಿಸಲು ಗುರುವಾರ (ಸೆ.5) ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಪುರಭವನದಲ್ಲಿ ಪಕ್ಷದ ಸಭೆ ಕರೆಯಲಾಗಿದೆ. ಕರ್ನಾಟಕದ ಮುಖ್ಯ ಸಂಯೋಜಕ ಎಂ.ಎಲ್‌.ತೋಮರ್‌, ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಮತ್ತು ರಾಜ್ಯ ಘಟಕದ ನೂತನ ಅಧ್ಯಕ್ಷ ಎಂ.ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ. 

‘ಚಾಮರಾಜನಗರ ಜಿಲ್ಲೆಯ ಹಾಗೂ ಎಲ್ಲ ವಿಧಾನಸಭಾ ಕ್ಷೇತ್ರಗಳ ಪಕ್ಷದ ಮಾಜಿ, ಹಾಲಿ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು’ ಎಂದು ಎಂ.ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಮಹೇಶ್‌ ಬೆಂಬಲಿಗರ ಸಭೆ ಇಂದು: ಈ ಮಧ್ಯೆ, ಪಕ್ಷದಿಂದ ಉಚ್ಚಾಟನೆಗೊಂಡಿರುವ ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರ ಬೆಂಬಲಿಗರು ಬುಧವಾರ ನಗರದಲ್ಲಿ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದಾರೆ. 

ಹೊಸ ಪಕ್ಷ ಸ್ಥಾಪಿಸುವ ಬಗ್ಗೆ ಮಹೇಶ್‌ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರತಿಕ್ರಿಯಿಸಿ (+)