ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಸ್‌ಪಿ ಬಗ್ಗೆ ಬಿಜೆಪಿ, ಕಾಂಗ್ರೆಸ್‌ಗೆ ಭಯ: ಹ.ರಾ.ಮಹೇಶ್‌

Published 17 ಏಪ್ರಿಲ್ 2024, 14:42 IST
Last Updated 17 ಏಪ್ರಿಲ್ 2024, 14:42 IST
ಅಕ್ಷರ ಗಾತ್ರ

ಚಾಮರಾಜನಗರ: ‘ಬಿಎಸ್‌ಪಿ ಸ್ಪರ್ಧೆಯಿಂದ ಕಾಂಗ್ರೆಸ್‌ ಮತ್ತು ಬಿಜೆಪಿಯವರಿಗೆ ಬಿಸಿ ಮುಟ್ಟಿದ್ದು, ನಮ್ಮ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರಾ.ಮಹೇಶ್‌ ಬುಧವಾರ ಹೇಳಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಮ್ಮ ಪಕ್ಷದ ಕಾರ್ಯಕರ್ತರು, ಮುಖಂಡರು ಕ್ಷೇತ್ರದಾದ್ಯಂತ ತಮ್ಮದೇ ವಾಹನಗಳಲ್ಲಿ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕರ್ತರ ಉತ್ಸಾಹ ನೋಡಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಭಯಗೊಂಡಿದ್ದಾರೆ. ನಾವು ಪ್ರಚಾರಕ್ಕೆ ಹೋದ ಕಡೆಗಳಲ್ಲಿ ಪಕ್ಷದ ಅಭ್ಯರ್ಥಿ ಕೃಷ್ಣಮೂರ್ತಿ ಪರ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ’ ಎಂದು ಹೇಳಿದರು. 

‘ಎಂ.ಕೃಷ್ಣಮೂರ್ತಿ ಅವರು ಪಕ್ಷದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿ, ಅನೇಕ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅವರಿಗೆ ಚಾಮರಾಜನಗರ ಲೋಕಸಭೆಯ ಕ್ಷೇತ್ರದ ಸಂಪೂರ್ಣ ಪರಿಚಯವಿದೆ. ನಮ್ಮ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡುವುದರ ಜೊತೆಗೆ ಜನರಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನೂ ಮೂಡಿಸುತ್ತಿದ್ದೇವೆ’ ಎಂದು ಮಹೇಶ್‌ ಹೇಳಿದರು. 

ಬೇರೆ ಅಭ್ಯರ್ಥಿ ಸಿಗಲಿಲ್ಲವೇ: ‘ಕಾಂಗ್ರೆಸ್‌ ‍‍ಪಕ್ಷವು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರ ಮಗ ಸುನಿಲ್‌ ಬೋಸ್‌ಗೆ ಟಿಕೆಟ್‌ ನೀಡಿದೆ. ಅವರು ಅಭ್ಯರ್ಥಿಯಾಗಿರುವುದು ಕಾಂಗ್ರೆಸ್‌ ಕಾರ್ಯಕರೇ ಕಂಗಾಲಾಗುವಂತೆ ಮಾಡಿದ್ದಾರೆ. ಸಂಸತ್‌ ಸದಸ್ಯರಾಗಿ ಇರುವವರು ಪ್ರಜ್ಞಾವಂತರಾಗಿರಬೇಕು. ಆದರೆ, ಬೋಸ್‌ ಅವರು ಅಸಮರ್ಥರು. ಕಾಂಗ್ರೆಸ್‌ನಲ್ಲಿ ಬೇರೆ ಸಮರ್ಥ ಅಭ್ಯರ್ಥಿ ಇರಲಿಲ್ಲವೇ’ ಎಂದು ಪ್ರಶ್ನಿಸಿದರು.

‘ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳುತ್ತಿರುವ ಬಿಜೆಪಿ ಅಭ್ಯರ್ಥಿಯೂ ಸಮರ್ಥರಲ್ಲ. ಎರಡು ಪಕ್ಷಗಳ ಅಭ್ಯರ್ಥಿಗಳಿಗೆ ಹೋಲಿಸಿದರೆ ನಮ್ಮ ಅಭ್ಯರ್ಥಿ ಎಂ.ಕೃಷ್ಣಮೂರ್ತಿ ಸೂಕ್ತ. ಹಾಗಾಗಿ ಕ್ಷೇತ್ರದ ಮತದಾರರು ಬಿಎಸ್‌ಪಿಯನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಕಾರ್ಯದರ್ಶಿ ಎಸ್.ಪಿ.ಮಹೇಶ್, ಚಂದ್ರಕಾಂತ್, ಉುಸ್ತುವಾರಿ ಅಮಚವಾಡಿ ಪ್ರಕಾಶ್ ಭಾಗವಹಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT