ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳ್ಳೂರು ನಾಗರಾಜ ಕಾವ್ಯಪ್ರಶಸ್ತಿಗೆ ’ಬುದ್ಧನ ಮಾರ್ಗದಲ್ಲಿ’ ಆಯ್ಕೆ

Last Updated 27 ಏಪ್ರಿಲ್ 2021, 17:05 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ರಂಗವಾಹಿನಿ ಸಂಸ್ಥೆ ಹಾಗೂ ಮೈಸೂರಿನ ರಾಮ ಮನೋಹರ ಲೋಹಿಯ ಟ್ರಸ್ಟ್ ಜಂಟಿಯಾಗಿ ಪ್ರತಿವರ್ಷ ನೀಡುವ ಮುಳ್ಳೂರು ನಾಗರಾಜ ಕಾವ್ಯಪ್ರಶಸ್ತಿಗೆ ಗುಂಡ್ಲುಪೇಟೆ ತಾಲ್ಲೂಕಿನ ಕವಿ, ಬರಹಗಾರ ಹಾಗೂ ಚಲಚಿತ್ರ ನಿರ್ದೇಶಕ ಡಾ.ಕೃಷ್ಣಮೂರ್ತಿ ಚಮರಂ ಅವರ ’ಬುದ್ಧನ ಮಾರ್ಗದಲ್ಲಿ’ ಕವನ ಸಂಕಲನ ಆಯ್ಕೆಯಾಗಿದೆ. ಇದು 2019ನೇ ಸಾಲಿನ ಪ್ರಶಸ್ತಿಯಾಗಿದೆ.

ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಡಾ.ಕೃಷ್ಣಮೂರ್ತಿ ಚಮರಂ ಅವರು 30 ವರ್ಷಗಳಿಂದಲೂ ಸಾಹಿತ್ಯ ರಚನೆಯಲ್ಲಿ ತೊಡಗಿದ್ದಾರೆ. ಮೂಲತಃ ಜೈವಿಕ ತಂತ್ರಜ್ಞಾನ ವಿಷಯದಲ್ಲಿ ಮೈಸೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿರುವ ಡಾ.ಚಮರಂ, ನಂತರ ಸಾಮಾಜಿಕ ಚಳವಳಿಯಲ್ಲಿ ತೊಡಗಿಸಿಕೊಂಡರು. ಅದರೊಡನೆ ಸಾಹಿತ್ಯ, ಸಿನಿಮಾ ಹಾಗೂ ಪತ್ರಿಕೋದ್ಯಮದಲ್ಲಿ ನಿರತಾಗಿರುವ ಅವರು, 25ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT