ಹನೂರು: ಸಮೀಪದ ಕಾಮಗೆರೆ ಬಳಿ ಮಹದೇಶ್ವರ ಬೆಟ್ಟದಿಂದ ಕೊಳ್ಳೆಗಾಲಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಬಸ್ನಲ್ಲಿದ್ದ 14ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆ ಹಾಗೂ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾವಗಡ ಅಪಘಾತ: ವಿದ್ಯಾರ್ಥಿಗಳೇ ಹೆಚ್ಚಿದ್ದ ಬಸ್, ಮೊಬೈಲಲ್ಲಿ ಮಾತಾಡುತ್ತಿದ್ದ ಚಾಲಕ

ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಮಹದೇಶ್ವರ ಖಾಸಗಿ ಬಸ್, ಕಾಮಗೆರೆ ಬಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮುಗುಚಿ ಬಿದ್ದಿದೆ. ಬಸ್ನಲ್ಲಿ60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಈ ಪೈಕಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 9 ಜನ ಕೊಳ್ಳೇಗಾಲ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಐವರು ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಪಾವಗಡ ಬಸ್ ಅಪಘಾತ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದ್ವಿಚಕ್ರ ವಾಹನ ಸವಾರನಿಗೂ ತಲೆಗೆ ಪೆಟ್ಟಾಗಿದ್ದು ಹೋಲಿಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹನೂರು ಶಾಸಕ ಆರ್.ನರೇಂದ್ರ ಹಾಗೂ ಬಿಜೆಪಿ ಮುಖಂಡ ದತ್ತೇಶ್ ಕುಮಾರ್ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.