ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ‘ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 1ರಂದು ಚಾಲನೆ ನೀಡಲಿದ್ದಾರೆ’ ಎಂದು ಸಿ.ಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹೇಳಿದರು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪತ್ರಕರ್ತರಿಗೆ ₹ 5 ಲಕ್ಷದವರೆಗೆ ಆರೋಗ್ಯ ಚಿಕಿತ್ಸಾ ವೆಚ್ಚ ಭರಿಸುವ ಆರೋಗ್ಯ ಸಂಜೀವಿನಿ ಕಾರ್ಡ್ ಸೌಲಭ್ಯಕ್ಕೂ ಅಂದು ಸಿ.ಎಂ ಚಾಲನೆ ನೀಡಲಿದ್ದಾರೆ’ ಎಂದರು.

ಪತ್ರಕರ್ತರ ವೃತ್ತಿ ಹಾಗೂ ಬದುಕಿನಲ್ಲಿ ಎದುರಾಗುವ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದೆ. ಮಾಧ್ಯಮದವರ ಉಳಿದ ಬೇಡಿಕೆಗಳು ಶೀಘ್ರ ಈಡೇರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಪಡೆದ 100ಕ್ಕೂ ಹೆಚ್ಚು ಮಕ್ಕಳಿಗೆ ಪ್ರಮಾಣಪತ್ರ, ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.