ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಕಲವಾಡಿ | ಹುಲಿ ಸೆರೆಗೆ ಬೋನು, ಕ್ಯಾಮೆರಾ ಅಳವಡಿಕೆ

Last Updated 27 ಜುಲೈ 2020, 16:05 IST
ಅಕ್ಷರ ಗಾತ್ರ

ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಹಲಸಿನ ಕಟ್ಟೆ, ಸಾಸಿವೆ ಹಳ್ಳದ ವ್ಯಾಪ್ತಿಯಲ್ಲಿ ಕಂಡು ಬಂದಿರುವ ಹುಲಿಯನ್ನು ಸೆರೆ ಹಿಡಿಯುವುದಕ್ಕಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟಿದ್ದಾರೆ.

ಅದರ ಚಲನವಲನದ ಮೇಲೆ ನಿಗಾ ಇಡುವುದಾಗಿ ಅಲ್ಲಲ್ಲಿ ಎಂಟು ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಳವಡಿಸಲಾಗಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಯನ್ನೂ ಸ್ಥಳದಲ್ಲಿ ನಿಯೋಜಿಸಲಾಗಿದೆ.

ಸೋಮವಾರ ಹುಲಿ ಯಾರ ಕಣ್ಣಿಗೂ ಬಿದ್ದಿಲ್ಲ. ಆದರೆ, ಕೆಲವು ಕಡೆಗಳಲ್ಲಿ ಅದರ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಮೂರು ನಾಲ್ಕು ಕಿ.ಮೀ ವ್ಯಾಪ್ತಿಯಲ್ಲಿ ಅದು ಸುತ್ತಾಡುತ್ತಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಈ ಸಂಬಂಧ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿರುವ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ಕುಮಾರ್‌ ಅವರು, ‘ಸೋಮವಾರ ಹುಲಿ ಕಾಣಿಸಿಕೊಂಡಿಲ್ಲ. ಹೆಜ್ಜೆಗಳು ಕಂಡು ಬಂದಿವೆ. ಸೆರೆ ಹಿಡಿಯುವ ಪ್ರಯತ್ನವಾಗಿ ಬೋನು ಇರಿಸಿದ್ದೇವೆ. ಎಂಟು ಕ್ಯಾಮೆರಾ ಟ್ರ್ಯಾಪ್‌ಗಳನ್ನು ಅಲ್ಲಲ್ಲಿ ಇರಿಸಿದ್ದೇವೆ. ಹುಲಿ ಎಲ್ಲಿಯಾದರೂ ಕಂಡು ಬಂದರೆ ತಕ್ಷಣ ಮಾಹಿತಿ ನೀಡುವಂತೆಯೂ ಗ್ರಾಮಸ್ಥರಿಗೆ ತಿಳಿಸಿದ್ದೇವೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT