ಗುಂಡ್ಲುಪೇಟೆ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಕಲ್ಲಹಳ್ಳಿ ಗ್ರಾಮದ ನಂಜುಂಡಶೆಟ್ಟಿ (50) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ವೀರನಪುರ ಕ್ರಾಸ್ ಬಳಿ ಭಾನುವಾರ ರಾತ್ರಿ ನಡೆದಿದೆ.
ಶ್ರೀನಿವಾಸ್ ಎಂಬುವರಿಗೆ ತೀವ್ರತರದ ಗಾಯಗಳಾಗಿವೆ. ಬೈಕ್ ಸವಾರ ಗುಂಡ್ಲುಪೇಟೆ ಪಟ್ಟಣದಿಂದ ಹೋಗುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುಗೆ ಚಿಕಿತ್ಸೆ ಕೊಡಿಸಿದ್ದಾರೆ.
ಕಾರು ಮತ್ತು ಬೈಕ್ ಅನ್ನು ವಶಕ್ಕೆ ಪಡೆದ ಗುಂಡ್ಲುಪೇಟೆ ಠಾಣೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತ: ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಿರುವ ಕಾರಣ ಅಪಘಾತ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನಗಳಿಗೆ ವೇಗ ಮಿತಿ ವಿಧಿಸಬೇಕು. ಕೆಲವು ತಿರುವಿನ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡುವಂತೆ ವಾಹನ ಸವಾರ ದೇವರಾಜ್ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.