ಗುಂಡ್ಲುಪೇಟೆ: ‘ರಾಹುಲ್ ಗಾಂಧಿ ದೊಡ್ಡ ಚೋರ್, ಅವರ ಖಾಂದಾನ್ ದೊಡ್ಡ ಚೋರ್’ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

‘ ಮತ ಕಳವು (ವೋಟ್ ಚೋರಿ) ಆಗಿದೆ’ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಅವರು ಗುಂಡ್ಲುಪೇಟೆಯಲ್ಲಿ ಮಾಧ್ಯಮದವರಲ್ಲಿ ಪ್ರತಿಕ್ರಿಯಿಸಿ, ‘ಡಾ.ಬಿ.ಆರ್.ಅಂಬೇಡ್ಕರ್ 1952ರಲ್ಲಿ ಚುನಾವಣೆಗೆ ನಿಂತಾಗ 14 ಸಾವಿರ ಮತಗಳಿಂದ ಸೋತರು. ಆ ವೇಳೆ, 74 ಸಾವಿರ ಮತ ತಿರಸ್ಕೃತಗೊಂಡಿತ್ತು. ಸರಿಯಾಗಿ ಚುನಾವಣೆ ಆಗಿದ್ದರೆ ಅಂಬೇಡ್ಕರ್ ಗೆಲ್ಲುತ್ತಿದ್ದರು. ಆದರೆ ಚುನಾವಣೆಯಲ್ಲಿ ಸೋಲಿಸಬೇಕು ಎಂಬುದಕ್ಕೆ ಕುಲಗೆಟ್ಟ ಮತ ಮಾಡಿದ್ದರು. ಆದ ಕಾರಣ ರಾಹುಲ್ ಗಾಂಧಿ ಚೋರ್. ಅದಾದ ಮೇಲೆ ಇಂದಿರಾ ಗಾಂಧಿ ಚೋರ್. ರಾಜೀವ್ ಗಾಂಧಿ ಚೋರ್. ಚೋರ್ ಗಳೆಲ್ಲಾ ಸೇರಿ ಇವತ್ತು ಏನೂ ಚೋರಿ ಮಾಡಲಾಗದ ಯಂತ್ರಗಳನ್ನು ಚೋರಿ ಅಂತಿದ್ದಾರೆ. ಮಹಾತ್ಮ ಗಾಂಧಿ ಕುಟುಂಬದ ಬಗ್ಗೆ ಗೌರವವಿದೆ. ನೆಹರೂ ಕಾಲದಲ್ಲಿ ಗಾಂಧಿ ಹೆಸರು ಇರಲಿಲ್ಲ. ಆಮೇಲೆ ಎಲ್ಲಿಂದ ಬಂತು ಇವರಿಗೆ ಗಾಂಧಿ ಹೆಸರು, ಇವರು ನಕಲಿ ಗಾಂಧಿ ಫ್ಯಾಮಿಲಿ’ ಎಂದು ಕಿಡಿಕಾರಿದರು.

ಐಸಿಯುನಲ್ಲಿ ಸರ್ಕಾರ ‘ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಮಾತೆತ್ತಿದರೆ ಗ್ಯಾರಂಟಿ ಎಂದು ದಿನ ದೂಡುತ್ತಿದ್ದಾರೆ. ಜನರ ಪರಿಸ್ಥಿತಿ ಅಧೋಗತಿಗೆ ಇಳಿದಿದೆ. ಎಸ್ಇಪಿ, ಟಿಎಸ್ ಪಿ ಹಣ ಗ್ಯಾರಂಟಿಗೆ ಬಳಸಿಕೊಂಡರೂ ದಲಿತ ಸಚಿವರು ಮಾತನಾಡುತ್ತಿಲ್ಲ. ಈ ಸರ್ಕಾರ ಬಂದ ದಿನದಿಂದಲೂ ದಲಿತ ಸಚಿವರು ಧ್ವನಿ ಎತ್ತುತ್ತಿಲ್ಲ, ಸಿದ್ದರಾಮಯ್ಯ ಏನ್ ಟೆರರಿಸ್ಟಾ, ನ್ಯಾಯ ಕೇಳಿದರೆ ಮೇಲ್ ಬೀಳ್ತಾರೆ’ ಎಂದು ಕುಟುಕಿ, ‘ಸರ್ಕಾರ ನವೆಂಬರ್ ಕ್ರಾಂತಿ ವಿಚಾರದಿಂದ ಐಸಿಯುನಲ್ಲಿ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.