ಚಾಮರಾಜನಗರ: ಶಿಕ್ಷಕರ ದಿನಾಚರಣೆ ಅಂಗವಾಗಿ 2025-26ನೇ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಸೆ.19ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಪ್ರಶಸ್ತಿಗೆ ಆಯ್ಕೆಯಾದವರು: ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಾಮರಾಜನಗರ ತಾಲ್ಲೂಕಿನ ಬೂದಂಬಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಿವಮಲ್ಲು, ಗುಂಡ್ಲುಪೇಟೆ ತಾಲ್ಲೂಕಿನ ತ್ರಿಯಂಬಕಪುರ ಶಾಲೆಯ ಸಹಶಿಕ್ಷಕಿ ಜಿ.ವಿ.ಕಲಾಶ್ರೀ, ಕೊಳ್ಳೇಗಾಲ ತಾಲ್ಲೂಕಿನ ಬಾಪುನಗರ ಶಾಲೆಯ ಸಹ ಶಿಕ್ಷಕಿ ಸಿ.ಮಂಗಳಗೌರಿ, ಹನೂರು ತಾಲ್ಲೂಕಿನ ಆಲಂಬಾಡಿ ಶಾಲೆಯ ಸಹಶಿಕ್ಷಕ ಜಿ.ಜಯರಾಮನ್, ಯಳಂದೂರು ತಾಲ್ಲೂಕಿನ ರಾಮಾಪುರ ಶಾಲೆಯ ಸಹಶಿಕ್ಷಕಿ ಜಿ.ಗೀತಾ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಚಾಮರಾಜನಗರ ಸರ್ಕಾರಿ ಪಿ.ಡಬ್ಲೂ.ಡಿ ಕಾಲೊನಿ ಶಾಲೆಯ ಮುಖ್ಯ ಶಿಕ್ಷಕಿ ಮಾಲಿನಿ, ಗುಂಡ್ಲುಪೇಟೆ ತಾಲ್ಲೂಕಿನ ಶಿವಪುರ ಶಾಲೆಯ ಮುಖ್ಯಶಿಕ್ಷಕ ಬಿ.ಎನ್.ವೃಷಭೇಂದ್ರ, ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಶಾಲೆಯ ಸಹ ಶಿಕ್ಷಕಿ ರೂಪಾ, ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು ಶಾಲೆಯ ಶಿಕ್ಷಕ ಆರ್.ಮುತ್ತುಸ್ವಾಮಿ, ಯಳಂದೂರು ತಾಲ್ಲೂಕಿನ ಅಗರ ಶಾಲೆಯ ಸಹಶಿಕ್ಷಕಿ ಆರ್.ಮಮತಾ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಚಾಮರಾಜನಗರ ತಾಲ್ಲೂಕಿನ ಗೂಳಿಪುರ ಶಾಲೆಯ ಸಹಶಿಕ್ಷಕ ಎನ್.ನಾಗೇಶ್, ಗುಂಡ್ಲುಪೇಟೆ ತಾಲ್ಲೂಕಿನ ಹುಂಡೀಪುರ ಶಾಲೆಯ ಸಹಶಿಕ್ಷಕ ವೆಂಕಟೇಶ್, ಕೊಳ್ಳೇಗಾಲ ಸರ್ಕಾರಿ ಉರ್ದು ಪ್ರೌಢಶಾಲೆ ಸಹಶಿಕ್ಷಕಿ ಸಲ್ಮಾ ಸಿದ್ದಿಕ್, ಹನೂರು ತಾಲ್ಲೂಕಿನ ರಾಮಾಪುರ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಸಹಶಿಕ್ಷಕ ಕೆ.ಎಂ.ಮಧುಸೂಧನ್, ಯಳಂದೂರು ತಾಲ್ಲೂಕಿನ ಮದ್ದೂರು ಶಾಲೆಯ ಸಹಶಿಕ್ಷಕ ಹೆಚ್.ಬ್ರಹ್ಮಲಿಂಗಯ್ಯ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಚಂದ್ರಪಾಟೀಲ್ ತಿಳಿಸಿದ್ದಾರೆ.

ಭಾವಚಿತ್ರ ಮೆರವಣಿಗೆ

ಶಿಕ್ಷಕರ ದಿನಾಚರಣೆ ಅಂಗವಾಗಿ 19ರಂದು ಬೆಳಿಗ್ಗೆ 9.30ಕ್ಕೆ ಡಾ.ಎಸ್.ರಾಧಾಕೃಷ್ಣನ್ ಮತ್ತು ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರದ ಮೆರವಣಿಗೆ ನಗರದ ಸರ್ಕಾರಿ ಪೇಟೆ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರಾರಂಭವಾಗಲಿದೆ. ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಉದ್ಘಾಟಿಸುವರು. ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನಿಲ್ ಬೋಸ್ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಪ್ರಾಧ್ಯಾಪಕ ಡಾ. ಬಿಪಿನ್ ನಾಗರಾಜು ಭಾಷಣ ಮಾಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.