ಚಾಮರಾಜನಗರ: ತಾಲ್ಲೂಕಿನ ತಮ್ಮಡಹಳ್ಳಿ ಗ್ರಾಮದ ಮುಖಂಡ ಸುಬ್ಬನಾಯಕ ಸೇರಿದಂತೆ ಹಲವರು ಗುರುವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಗ್ರಾಮದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖಂಡರಾದ ಸುಬ್ಬನಾಯಕ, ಸುರೇಶ್ ನಾಯಕ, ಶಿವಪುರ ನಂಜುಂಡೇಗೌಡ, ಮಂಜುನಾಥ್ ಬೆಳ್ಳಶೆಟ್ಟಿ, ಚಿಕ್ಕರಂಗಶೆಟ್ಟಿ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಗೊಂಡರು. ಎಲ್ಲರಿಗೂ ಪಕ್ಷದ ಶಾಲು ಹಾಕಿ ಬರ ಮಾಡಿಕೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ, ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಮಾಜಿಕ ನ್ಯಾಯ ಹಾಗೂ ರಾಜ್ಯದ ಅಭಿವೃದ್ದಿ ಸಾಧ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ.

ಗ್ರಾಮದಲ್ಲಿ ₹ 1 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಾರ್ಣಕ್ಕೆ ಅನುದಾನ ನೀಡಲಾಗಿದೆ. ಗ್ರಾಮದ ಮುಖ್ಯರಸ್ತೆಯನ್ನು ಸಿಮೆಂಟ್ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ₹ 80 ಲಕ್ಷ ನೀಡಲಾಗಿದ್ದು, ತಮ್ಮಡಹಳ್ಳಿಯನ್ನು ಮಾದರಿ ಗ್ರಾಮವಾಗಿಸಲು ಒತ್ತು ನೀಡಲಾಗುವುದು ಎಂದರು.

ಹಿರಿಯರಾದ ಸುಬ್ಬನಾಯಕ ಹಾಗೂ ಬೆಂಬಲಿಗರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಬಲ ಬಂದಂತಾಗಿದೆ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಗೆಲುಗಿಗೆ ಸಹಕಾರಿಯಾಗಲಿದೆ. ಎಲ್ಲರೂ ಸೇರಿ ಪಕ್ಷವನ್ನು ಸದೃಢಗೊಳಿಸಬೇಕು ಎಂದು ಕರೆ ನೀಡಿದರು.

ಕನಿಷ್ಟ ಯೋಜನೆಗಳ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಎಸ್ಪಿಕೆ ಉಮೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅರಕಲವಾಡಿ ಸೋಮನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹಮದ್ ಅಸ್ಗರ್, ಎ.ಎಸ್.ಗುರುಸ್ವಾಮಿ, ಮುಖಂಡರಾದ ರಾಜಪ್ಪ, ಮಹೇಶ್ ಕುದರ್, ಸುಹೇಲ್ ಆಲಿ ಖಾನ್, ಅಯೂಬ್ ಖಾನ್, ಪಿ.ಶೇಖರಪ್ಪ, ಗುರುಮಲ್ಲಪ್ಪ, ಎನ್.ಎಂ.ಶಿವಸ್ವಾಮಿ, ಚಿನ್ನಸ್ವಾಮಿ, ಆರ್.ರಾಜು, ಉಡಿಗಾಲ ನಂಜಪ್ಪ, ಕೊಂಗಳ್ಳಪ್ಪ, ಮಹದೇವಸ್ವಾಮಿ, ಮಹದೇವಸ್ವಾಮಿ, ಗುರುಬಸಪ್ಪ, ಆರ್.ಪುರುಷೋತ್ತಮ್, ಹೊಸಹಳ್ಳಿ ಮಧುಸೂದನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.