ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚಕ್ಕೆ ಬೇಡಿಕೆ– ವಾಲ್ಮೀಕಿ ನಿಗಮದ ಅಧಿಕಾರಿ ನಾಗರಾಜು ಲೋಕಾಯುಕ್ತ ಬಲೆಗೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗರಾಜು ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ
Published 2 ಮಾರ್ಚ್ 2024, 14:07 IST
Last Updated 2 ಮಾರ್ಚ್ 2024, 14:07 IST
ಅಕ್ಷರ ಗಾತ್ರ

ಚಾಮರಾಜನಗರ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊಳವೆ ಬಾವಿ ಕೊರೆಸಲು ಅರ್ಜಿದಾರರಿಂದ ₹10 ಸಾವಿರ ಲಂಚ ಪಡೆಯುತ್ತಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ತಾಲ್ಲೂಕು ಅಭಿವೃದ್ಧಿ ಅಧಿಕಾರಿ ನಾಗರಾಜು ಎಂಬುವವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. 

ತಾಲ್ಲೂಕಿನ ಫಲಾನುಭವಿಯೊಬ್ಬರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿದ್ದರು. ಅವರ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಬೇಕಾಗಿತ್ತು.  ಕೆಲಸ ಮಾಡಿಕೊಡಲು ನಾಗರಾಜು ಅವರು ₹10 ಸಾವಿರ ಲಂಚ ಕೇಳಿದ್ದರು. ಈ ಬಗ್ಗೆ ಫಲಾನುಭವಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 

ಶನಿವಾರ ನಗರದಲ್ಲಿ ನಾಗರಾಜು, ದೂರುದಾರರಿಂದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ಬಂಧಿಸಿ, ₹10 ಸಾವಿರ ನಗದನ್ನು ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಮ್ಯಾಥ್ಯೂ ಥಾಮಸ್‌ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ ಶಶಿಕುಮಾರ್ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT