ಚಾಮರಾಜನಗರ: ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಯ ಮೂಲಕ ‘ಹಿಂದುಳಿದ ಜಿಲ್ಲೆ’ ಎಂಬ ಹಣೆಪಟ್ಟಿಯನ್ನು ಕಿತ್ತೊಗೆಯಲು ಜಿಲ್ಲಾಡಳಿತ ಕಾರ್ಯ ಯೋಜನೆ ರೂಪಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ತಿಳಿಸಿದರು.

ಜಿಲ್ಲಾ ಕಾರ್ಯಕರ್ತರ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಹುಲಿ ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಧಾಮಗಳು, ಜಲಪಾತ, ಜಲಾಶಯಗಳ ಹಿನ್ನೀರು, ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ನೈಸರ್ಗಿಕವಾಗಿ ಶ್ರೀಮಂತವಾಗಿದ್ದು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಪೂರಕವಾಗಿ ಬಳಸಿಕೊಂಡು ಪ್ರವಾಸಿಗರನ್ನು ಆಕರ್ಷಿಸಲಾಗುವುದು.

ಈಚೆಗೆ ಸುವರ್ಣಾವತಿ ಜಲಾಶಯದಲ್ಲಿ ಹಮ್ಮಿಕೊಂಡಿದ್ದ ಜಲ ಸಾಹಸ ಕ್ರೀಡೋತ್ಸವಕ್ಕೆ ಸಾರ್ವಜನಿಕರಿಂದ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಶಾಶ್ವತವಾಗಿ ಜಲಸಾಹಸ ಕ್ರೀಡೆಗಳ ಆಯೋಜನೆಗೆ ಚಿಂತನೆ ನಡೆಸಲಾಗಿದೆ. ತೆರೆಮರೆಯಲ್ಲಿರುವ ಜಿಲ್ಲೆಯ ಪ್ರವಾಸಿತಾಣಗಳನ್ನು ಪ್ರವಾಸೋದ್ಯಮಕ್ಕೆ ತೆರೆದುಕೊಳ್ಳುವಂತೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ನಗರದಲ್ಲಿ ಉದ್ಯಾನಗಳ ನಿರ್ವಹಣೆ ಕೊರತೆ ಇದ್ದು ಖಾಸಗಿ ಸಂಘ–ಸಂಸ್ಥೆಗಳ ಸಹಯೋಗದಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಾನವ ಪ್ರಾಣಿ ಸಂಘರ್ಷ ಪ್ರಕರಣಗಳ ತಡೆಗೆ ಅರಣ್ಯ ಇಲಾಖೆ ಜೊತೆ ಸಭೆ ನಡೆಸಲಾಗಿದೆ. ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚು ಬಾಧಿಸದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ನಗರ, ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಪೂರೈಕೆ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ. ಕುಡಿಯುವ ನೀರು ಪೂರೈಕೆಗೆ ಅನುದಾನ ಕೊರತೆ ಇಲ್ಲ, ಸಮಸ್ಯೆ ಕಂಡುಬಂದ ಗ್ರಾಮಗಳಿಗೆ ಟ್ಯಾಂಕರ್ ಹಾಗೂ ಕೊಳವೆ ಬಾವಿ ಮೂಲಕ ನೀರು ಪೂರೈಕೆ ಮಾಡಲಾಗುವುದು. ವಿಶೇಷವಾಗಿ ಹನೂರು ತಾಲ್ಲೂಕಿನ ಮೇಲೆ ನಿಗಾ ಇರಿಸಲಾಗಿದೆ.

ಜಿಲ್ಲೆಯಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ಸಿಗುತ್ತಿಲ್ಲ, ಯುವಜನತೆ ಅರ್ಧಕ್ಕೆ ಶಿಕ್ಷಣ ಮೊಟಕುಗೊಳಿಸುವ ಪ್ರಕರಣಗಳು ಹೆಚ್ಚಾಗಿದ್ದು ತಡೆಯಲಾಗುವುದು, ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತವಾಗಿದ್ದು ಮಳೆಯ ನೀರು ಭೂಮಿಗೆ ಇಂಗಿಸುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು, ಕರೆಗಳನ್ನು ತುಂಬಿಸುವ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು.

ಜಿಲ್ಲೆಯಲ್ಲಿ ಹೆಚ್ಚು ಬೆಳೆಯುವ ಅರಿಶಿನ ಬೆಳೆಯ ಮೌಲ್ಯವರ್ಧನೆ, ನಿಯಮಿತವಾಗಿ ಕುಡಿಯುವ ನೀರಿನ ಪೂರೈಕೆ, ಕಸ ಸಂಗ್ರಹ ಹಾಗೂ ವಿಲೇವಾರಿಗೆ ಸೂಚನೆ ನೀಡಲಾಗಿದೆ. ಅತಿ ಹೆಚ್ಚು ತ್ಯಾಜ್ಯ ಸಂಗ್ರಹ ಸ್ಥಳಗಳನ್ನು ಗುರುತಿಸಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಕಸ ತಂದು ಸುರಿಯುವವರಿಗೆ ದಂಡ ವಿಧಿಸಲಾಗುವುದು. ನಗರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾಗರಿಕರ ಸಹಭಾಗಿತ್ವ ಅಗತ್ಯ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಹೇಳಿದರು.

ಈ ಸಂದರ್ಭ ಜಿಲ್ಲಾ ಕಾರ್ಯಕರ್ತರ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಎನ್.ಸಿದ್ದಲಿಂಗಸ್ವಾಮಿ, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಲಕ್ಕೂರು ವೇದಿಕೆಯಲ್ಲಿ ಇದ್ದರು.

‘ಗಾಳಿಯಿಂದ ಶುದ್ಧ ನೀರು’

ತೀವ್ರ ಮಳೆ ಕೊರತೆ ಅಂತರ್ಜಲ ಮಟ್ಟ ಕುಸಿತದಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದಕ್ಕೆ ಪರಿಹಾರವಾಗಿ ಗಾಳಿಯಿಂದ ಶುದ್ಧ ಕುಡಿಯುವ ನೀರು ಉತ್ಪಾದಿಸುವ ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸಲಾಗಿದೆ. ಹರ್ಯಾಣ ಮೂಲದ ಕಂಪೆನಿಯು ಸೋಮವಾರ ಪೇಟೆಯ ಸರ್ಕಾರಿ ಶಾಲೆಯಲ್ಲಿ ಯಂತ್ರ ಅಳವಡಿಸಿದ್ದು ಮುಂದೆ ಶಾಲಾ ಕಾಲೇಜು ವಸತಿ ನಿಲಯ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಅಳವಡಿಕೆ ಚಿಂತನೆ ಇದ್ದು ಕಾರ್ಯಕ್ರಮ ಅನುಷ್ಠಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಲಾಗಿದೆ. –ಶ್ರೀರೂಪಾ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.