ಚಾಮರಾಜನಗರ: ಜಿಲ್ಲಾಧಿಕಾರಿಯಾಗಿದ್ದ ಸಿ.ಟಿ.ಶಿಲ್ಪಾನಾಗ್ ಅವರ ವರ್ಗಾವಣೆ ಖಂಡಿಸಿ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿದರು.

ರಾಜ್ಯ ಅಧ್ಯಕ್ಷೀಯ ಮಂಡಳಿ ಸದಸ್ಯ ಹೊನ್ನೂರು ಪ್ರಕಾಶ್ ಮಾತನಾಡಿ, ‘ಶಿಲ್ಪಾನಾಗ್ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಚಾಮರಾಜನಗರ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ. ರೈತರ ಸಮಸ್ಯೆಗಳಿಗೆ ಸ್ಪಂದನೆ ದೊರೆಯುತ್ತಿದ್ದು ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಿದ್ದಾರೆ’ ಎಂದರು.

‘ಕಾಡಂಚಿನಲ್ಲಿರುವ ಹಾಡಿಗಳಿಗೆ ಮೂಲಸೌಕರ್ಯಗಳು ದೊರೆಯುತ್ತಿವೆ, ಆದಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ. ರೈತರ ಸಮಸ್ಯೆಗಳನ್ನು ಜಿಲ್ಲಾಡಳಿತದ ಹಂತದಲ್ಲಿಯೇ ಬಗೆಹರಿಸಲು ಒತ್ತು ನೀಡಿದ್ದಾರೆ. ದಲಿತರು, ಹಿಂದುಳಿದ ವರ್ಗಗಳ ಸಮಸ್ಯೆಯನ್ನು ಆದ್ಯತೆ ಮೇಲೆ ಬಗೆಹರಿಸಿದ್ದಾರೆ. ಜಿಲ್ಲಾಧಿಕಾರಿಗಳ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದರೂ ಏಕಾಏಕಿ ವರ್ಗಾವಣೆ ಮಾಡಿರುವುದು ಖಂಡನೀಯ’ ಎಂದು ಹೊನ್ನೂರು ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವವರೆಗೂ ಜಿಲ್ಲಾಧಿಯಾರಿಯಾಗಿ ಶಿಲ್ಪಾನಾಗ್ ಅವರನ್ನೇ ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರಿಗೆ ಮನವಿ ಮಾಡಿದ್ದರೂ ಪರಿಗಣನೆಗೆ ತೆಗೆದುಕೊಂಡಿಲ್ಲ.

‘ಜಿಲ್ಲೆಯ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದ ಜಿಲ್ಲಾಧಿಕಾರಿಯನ್ನು ದಿಢೀರ್ ವರ್ಗಾವಣೆ ಮಾಡಿರುವುದು ಸರಿಯಲ್ಲ, ಕನಿಷ್ಠ ಎರಡು ವರ್ಷ ಜಿಲ್ಲೆಯಲ್ಲಿ ಉಳಿಸಿಕೊಂಡರೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ರೈತರ ಸಮಸ್ಯೆಗಳಿಗೂ ತುರ್ತು ಸ್ಪಂದನೆ ದೊರೆಯಲಿದೆ. ಸರ್ಕಾರ ವರ್ಗಾವಣೆ ಆದೇಶವನ್ನು ಹಿಂಪಡೆಯಬೇಕು, ಇಲ್ಲವಾದರೆ, ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.

‘ನೂತನ ಜಿಲ್ಲಾಧಿಕಾರಿ ನೇಮಕಕ್ಕೆ ರೈತ ಸಂಘದ ವಿರೋಧವಿಲ್ಲ. ಆದರೆ, ಜಿಲ್ಲೆಯಲ್ಲಿ ನಿರ್ಣಾಯಕ ಹಂತದಲ್ಲಿರುವ ಕಾಮಗಾರಿಗಳು ಮುಗಿಯಬೇಕಿದೆ. ಹನೂರು ತಾಲ್ಲೂಕಿನ ಚಂಗಡಿ ಗ್ರಾಮದ ಸ್ಥಳಾಂತರ, ಹಾಡಿಗಳಿಗೆ ರಸ್ತೆ, ವಿದ್ಯುತ್, ಕುಡಿಯುವ ನೀರಿನ ಸೌಲಭ್ಯಗಳಂತಹ ಮೂಲಸೌಕರ್ಯ ಕಾಮಗಾರಿಗಳು ಪೂರ್ಣಗೊಳ್ಳಲು ಶಿಲ್ಪಾನಾಗ್ ಅವರ ಅಗತ್ಯತೆ ಇದೆ’ ಎಂದು ಪ್ರತಿಪಾದಿಸಿದರು.

‘ಅಧಿಕಾರ ಸ್ವೀಕರಿಸದ ನೂತನ ಡಿಸಿ’

ಜಿಲ್ಲಾಧಿಕಾರಿ ಶಿಲ್ಪಾನಾಗ್ ವರ್ಗಾವಣೆಯಾಗಿದ್ದರೂ ನೂತನ ಜಿಲ್ಲಾಧಿಕಾರಿ ಶ್ರೀರೂಪಾ ಅಧಿಕಾರ ಸ್ವೀಕಾರ ಮಾಡಿಲ್ಲ. ಶಿಲ್ಪಾನಾಗ್ ರಜೆ ಮೇಲಿದ್ದಾರೆ ಎನ್ನಲಾಗಿದೆ. ಸರ್ಕಾರಿ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಸೇರಿದಂತೆ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಬಂದು ಬರಿಗೈಲಿ ವಾಪಸ್ ಆಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.